ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದಿದ್ದಾರೆ.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದಿದ್ದಾರೆ.ಸಂಮೇಧ್ ಪಿ ಜೈನ್ ಒಂದು ಬೆಳ್ಳಿ ಪದಕ, ವರುಣ್ ಜಿ ಪಾಟೀಲ್ ಒಂದು ಕಂಚಿನ ಪದಕ ಹಾಗೂ ನಿರಾಂತ್ ಕುಮಾರ್ ಗೌಡ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.