ಸಾರಾಂಶ
ಕನ್ನಡಪ್ರಭ ವಾರ್ತೆ, ದಾವಣಗೆರೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ದಾವಣಗೆರೆಯ ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಪುತ್ರ ಸೈಯದ್ ಖಾಲಿದ್ ಅಹ್ಮದ್ ಕಾರ್ಯವೈಖರಿ ಗುರುತಿಸಿ ಈ ನೇಮಕ ಮಾಡಲಾಗಿದೆ. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು. ಮಾತ್ರವಲ್ಲ, ಹಗಲಿರುಳು ತನಗೆ ವಹಿಸಿದ್ದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಅಲ್ಲಿಯೇ ಉಳಿದು ತಿಂಗಳುಗಟ್ಟಲೇ ಪ್ರಚಾರ ನಡೆಸಿದ್ದರು.ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದರು. ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ದಾವಣಗೆರೆ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ಹಲವೆಡೆ ಪ್ರಚಾರ ನಡೆಸಿದ್ದರು. ಜವಾಬ್ದಾರಿ ನಿಭಾಯಿಸಿ ಎಐಸಿಸಿ ನಾಯಕರ ಮನಗೆದ್ದಿದ್ದರು. ಈಗ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಜವಾಬ್ದಾರಿ ನೀಡಲಾಗಿದೆ.
ವಿಶ್ವಾಸಕ್ಕೆ ತಕ್ಕಂತೆ ಕೆಲಸ:ಎಐಸಿಸಿ, ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಕಾಂಗ್ರೆಸ್ ರಾಜ್ಯ ನಾಯಕರು, ರಾಷ್ಟ್ರನಾಯಕರು ನನ್ನ ಮೇಲಿಟ್ಟಿರುವ ನಂಬಿಕೆ ಹುಸಿಗೊಳಿಸುವುದಿಲ್ಲ. ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ಜೊತೆಗೆ ಪಕ್ಷ ಸಂಘಟನೆಯತ್ತಲೂ ಗಮನ ಹರಿಸುತ್ತೇನೆ ಎಂದು ಸೈಯದ್ ತಿಳಿಸಿದ್ದಾರೆ.
- - - -8ಕೆಡಿವಿಜಿ39ಃ: ಸೈಯದ್ ಖಾಲಿದ್ ಅಹ್ಮದ್