ಸಾರಾಂಶ
ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದ ದ.ಕ. ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ಮಂಗಳೂರು ಪಾಲಿಕೆ ಎದುರು ಬೇಡಿಕೆಯ ಮನವಿ ಪತ್ರ ಹಿಡಿದುಕೊಂಡು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದ ದ.ಕ. ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ಮಂಗಳೂರು ಪಾಲಿಕೆ ಎದುರು ಬೇಡಿಕೆಯ ಮನವಿ ಪತ್ರ ಹಿಡಿದುಕೊಂಡು ಸಾಂಕೇತಿಕ ಪ್ರತಿಭಟನೆ ನಡೆಸಿದರು.ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸದೆ ಸರ್ಕಾರ ಬಜೆಟ್‌ನಲ್ಲಿ ಅನ್ಯಾಯ ಎಸಗಿದೆ. ಕಳೆದ ಚುನಾವಣಾ ಕಾಲಕ್ಕೆ ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ 6ನೇ ಗ್ಯಾರಂಟಿ ನೀಡಿತ್ತು. ನೇರ ಪಾವತಿ ಜಾರಿಗೆ ನಗರಾಭಿವೃದ್ಧಿ ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಇನ್ನಾದರೂ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರ ಪಾವತಿ ಜಾರಿಗೊಳಿಸದಿದ್ದರೆ ಕುಡಿಯುವ ನೀರು, ಸ್ವಚ್ಛತೆ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.