ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಸಂಚು ಆರೋಪ: ಪ್ರತಿಭಟನೆ

| Published : Sep 26 2024, 11:29 AM IST

ಸಾರಾಂಶ

ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವ್ಯವಸ್ಥಿತ ರಾಜಕೀಯ ಸಂಚು ನಡೆಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಮೈಸೂರು-ಚನ್ನರಾಯಪಟ್ಟಣ ಮುಖ್ಯ ರಸ್ತೆಯ ಎಚ್.ಎಲ್.ಬಿ.ಸಿ ವೃತ್ತದಲ್ಲಿ ಶೋಷಿತ ವರ್ಗಗಳ ಒಕ್ಕೂಟದ ವತಿಯಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಅವರನ್ನು ಅನಗತ್ಯವಾಗಿ ತಳಕು ಹಾಕುವ ಮೂಲಕ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ , ಮುಖಂಡರಾದ ಬಿ.ಎಲ್.ದೇವರಾಜು, ತಾಲೂಕು ಉಸ್ತುವಾರಿ ಚಿನಕುರುಳಿ ರಮೇಶ್, ಕೆಪಿಸಿ.ಸಿ ಸದಸ್ಯ ಕಿಕ್ಕೇರಿ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಹರಳಹಳ್ಳಿ ವಿಶ್ವನಾಥ್, ಬಿ.ನಾಗೆಶ್, ದಲಿತ ಮುಖಂಡ ರಾಜಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.ಶಾಸಕ ಸ್ಥಾನದಿಂದ ಮುನಿರತ್ನ ವಜಾಗೆ ಆಗ್ರಹ

ಕನ್ನಡಪ್ರಭ ವಾರ್ತೆ ಮಂಡ್ಯಒಕ್ಕಲಿಗ ಹಾಗೂ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಕೃಷ್ಣ ಆಗ್ರಹಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುನಿರತ್ನ ಸಮುದಾಯಗಳ ಬಗ್ಗೆ ನಾಲಗೆ ಹರಿಬಿಟ್ಟಿರುವುದು ಖಂಡನೀಯ. ಯಾವುದೇ ಸಮುದಾಯವಾದರೂ ಅವಹೇಳನ ಮಾಡುವುದು ಸರಿಯಲ್ಲ. ಆಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ಅದರಲ್ಲಿನ ಮಾತು ಮುನಿರತ್ನ ಅವರದೇ ಎನ್ನುವುದು ಖಚಿತವಾದ ಬಳಿಕ ರಾಜ್ಯಾದ್ಯಂತ ಹೋರಾಟ ಮಾಡುವುದು ಎಂದು ಎಚ್ಚರಿಕೆ ನೀಡಿದರು.ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸಮುದಾಯ ಕುರಿತು ಲಘುವಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಮುಂದಿನ ದಿನದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಸಂಘದ ಸುಜಾತಾಕೃಷ್ಣ, ಎಂ.ಕೆ.ಕುಮಾರ್, ಕೃಷ್ಣೇಗೌಡ ಇತರರಿದ್ದರು.