ಸಾರಾಂಶ
ಗ್ರಾಪಂ ವ್ಯಾಪ್ತಿ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಭಿವೃದ್ಧಿಗೆ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ತಲುಪಿಸಲು ಶ್ರಮಿಸುತ್ತೇನೆ .
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ತೊರೆಬೊಮ್ಮನಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಟಿ.ಎಸ್.ಜಗದೀಶ್ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದಿನ ಅಧ್ಯಕ್ಷ ಮೋಹನ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎಸ್. ಜಗದೀಶ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಜಗದೀಶ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳಾದ ತಾಪಂ ಇಒ ರಾಮಲಿಂಗಯ್ಯ ಘೋಷಿಸಿದರು.
ನೂತನ ಅಧ್ಯಕ್ಷ ಟಿ.ಎಸ್.ಜಗದೀಶ್ ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ತೊರೆಬೊಮ್ಮನಹಳ್ಳಿ, ಸುಣ್ಣದೊಡ್ಡಿ, ಮುಡಿನಹಳ್ಳಿ, ಹೊನ್ನಯಕನಕಹಳ್ಳಿ , ಪುಟ್ಟೇಗೌಡನ ದೊಡ್ಡಿ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದರು.ಗ್ರಾಪಂ ವ್ಯಾಪ್ತಿ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಭಿವೃದ್ಧಿಗೆ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ತಲುಪಿಸಲು ಶ್ರಮಿಸುತ್ತೇನೆ ಎಂದರು.
ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಇಂದ್ರಮ್ಮ ಮಾಜಿ ಧ್ಯಕ್ಷೆ ಲಕ್ಷಮ್ಮ, ಮಾಜಿ ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಅನಿಲ್ ಕುಮಾರ್, ಮುಡಿನಹಳ್ಳಿ ಶ್ರೀನಿವಾಸ್, ಶಿವಲಿಂಗೇಗೌಡ, ಸವಿತಾ, ಬೇಬಿ ರಮೇಶ, ಲಕ್ಷ್ಮಮ್ಮ, ಚನ್ನಾಜಮ್ಮ, ತಾಯಮ್ಮ, ಪಿಡಿಒ ಅನುಕುಮಾರ್ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.