ಸಾರಾಂಶ
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ವಿವಿಧ ಶಾಲೆಯ 210 ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ರಾಷ್ಟ್ರಮಟ್ಟದ ಹಾಕಿ ಆಟಗಾರ ಹಾಗೂ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಆಟಗಾರ ಮಂಜುನಾಥ್ ಪಿ. ಎಲ್. ಚಾಲನೆ ನೀಡಿದರು. ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಮಂಜುನಾಥ್, ಯಾವುದೇ ಕ್ರೀಡೆಯಲ್ಲಿ ಮಕ್ಕಳಿಗೆ ಶಿಸ್ತು ಬಹಳ ಮುಖ್ಯ, ಹಾಗೆಯೇ ಪ್ರತಿ ಆಟದಲ್ಲೂ ಸೋಲು ಗೆಲುವು ಎಂಬುದು ಇದ್ದೇ ಇರುತ್ತದೆ, ಆದರೆ ಸೋಲನ್ನು ಒಪ್ಪಿಕೊಳ್ಳುವ ಮನೋಭಾವ ಮಕ್ಕಳಲ್ಲಿ ಇರಬೇಕು ಎಂದು ಕಿವಿ ಮಾತು ಹೇಳಿದರು.ಈ ಪಂದ್ಯಾವಳಿಯಲ್ಲಿ ಕೊಡಗಿನ ವಿವಿಧ ಶಾಲೆಗಳ 210 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್., ಆಡಳಿತ ನಿರ್ವಹಣಾಧಿಕಾರಿ ರವಿ ಪಿ., ಟೇಬಲ್ ಟೆನ್ನಿಸ್ ತರಬೇತುದಾರ ರಚನ್ ಪೊನ್ನಪ್ಪ ಹಾಗೂ ಪಂದ್ಯಾವಳಿ ಸಂಚಾಲಕ ದಿನೇಶ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.