ನರಸಿಂಹರಾಜಪುರಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ಡಾ.ನೂರಲ್ ಹುದಾ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಸೀಲ್ದಾರ್ ಡಾ.ನೂರಲ್ ಹುದಾ ಪರಿಶೀಲನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ಡಾ.ನೂರಲ್ ಹುದಾ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಗೆ ಭೇಟಿ ನೀಡಿ ಅಡುಗೆ ಮನೆ ಪರಿಶೀಲನೆ ನಡೆಸಿದರು. ಅಡುಗೆ ಮನೆಯನ್ನು ಇನ್ನಷ್ಟು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಬೇಕು. ಮಕ್ಕಳಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುಂತೆ ಗ್ರಂಥಾಲಯಕ್ಕೆ ಉತ್ತಮ ಪುಸ್ತಕಗಳನ್ನು ತರಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಧರ್ಮರಾಜ್ ಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ಡಾ.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಪ್ರತಿ ವಾರಕ್ಕೊಮ್ಮೆ ಕಂಪ್ಯೂಟರ್ ಕ್ಲಾಸ್ ನಡೆಸಬೇಕು. ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಕಂಪ್ಯೂಟರ್ ತಂತ್ರಜ್ಞಾನ ತಿಳಿದುಕೊಂಡಿರಬೇಕು. ಹಾಸ್ಟೆಲ್ ನಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ನಿರಂಜನಮೂರ್ತಿ ಅವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ರೆವಿನ್ಯೂ ಇನ್ಸಪೆಕ್ಟರ್ ಎಚ್.ಮಂಜುನಾಥ್, ಹಾಸ್ಟೆಲ್ ನ ವಾರ್ಡನ್ ಅಶ್ವಿನಿ ಇದ್ದರು.