ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ

| Published : Jun 07 2024, 12:36 AM IST

ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ, ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ, ದಾವಣಗೆರೆ

ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ ತಡೆಹಿಡಿಯಲಾಗಿದೆ. ಕೂಡಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಲ್ಲಿ ಕೂಡಲೇ ನೋಂದಣಿ ಪ್ರಾರಂಭಿಸಬೇಕು. ರಾಜ್ಯ ಸಾಮಾಜಿಕ ಭದ್ರತಾ ಮಂಡಳಿ ಯಿಂದ ಕೂಡಲೇ ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಘೋಷಿಸಬೇಕು. ಟೈಲರ್ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರಾಥಮಿಕ ಶಿಕ್ಷಣದಿಂದ ಪದವಿ ಶಿಕ್ಷಣವರೆಗೆ ವಿದ್ಯಾರ್ಥಿ ವೇತನ ನೀಡಬೇಕು. ಟೈಲರ್ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕ ಕಲ್ಯಾಣ ಮಂಡಳಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿ, ಕಾರ್ಮಿಕ ಸಚಿವ, ಕಾರ್ಮಿಕ ಆಯುಕ್ತರಿಗೆ ಹಕ್ಕೊತ್ತಾಯದ ಮನವಿ ರವಾನಿಸಿದರು.

ಈ ಸಂದರ್ಭ ಶ್ರಮಿಕ ಶಕ್ತಿಯ ಸತೀಶ್ ಅರವಿಂದ್, ಪವಿತ್ರ, ಆದೀಲ್ ಖಾನ್, ಅಶ್ಫಾಕ್, ನಾಜೀಮಾ ಬಾನು, ರವೀಂದ್ರ, ಚಾಂದಿನಿ, ಮಂಜುಳ, ಶೈಲಮ್ಮ, ಶಿಲ್ಪ, ಸುಜಾತ, ಕೌಸರ್ ಬಾನು, ನಾಸೀಮಾ ಬಾನು, ಶೃತಿ, ಮುಮ್ತಾಜ್, ಮಹಬೂಬಿ, ಅಫ್ರೀನ್ ಮತ್ತಿತರ ಟೈಲರ್ ಕಾರ್ಮಿಕರು ಇದ್ದರು.

- - - -5ಕೆಡಿವಿಜಿ38ಃ:

ದಾವಣಗೆರೆಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಂಡಳಿ ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಸಹಾಯಕ ಕಾರ್ಮಿಕ ಆಯುಕ್ತರ ಮೂಲಕ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.