ಪಿಟಿಸಿಎಲ್ ಕಾಯ್ದೆ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ

| Published : Nov 27 2024, 01:03 AM IST

ಪಿಟಿಸಿಎಲ್ ಕಾಯ್ದೆ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಭದ್ರಾವತಿ: ಪಿ.ಟಿ.ಸಿ.ಎಲ್ ಕಾಯ್ದೆ ನಿರ್ಲಕ್ಷಿಸುವ ಜೊತೆಗೆ ಉಲ್ಲಂಘನೆ ಮಾಡುತ್ತಿರುವ ಹಾಗೂ ಮನಸ್ಸಿಗೆ ಬಂದಂತೆ ಆದೇಶಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಾತಿನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಆಗ್ರಹಿಸಿದರು.

ಭದ್ರಾವತಿ: ಪಿ.ಟಿ.ಸಿ.ಎಲ್ ಕಾಯ್ದೆ ನಿರ್ಲಕ್ಷಿಸುವ ಜೊತೆಗೆ ಉಲ್ಲಂಘನೆ ಮಾಡುತ್ತಿರುವ ಹಾಗೂ ಮನಸ್ಸಿಗೆ ಬಂದಂತೆ ಆದೇಶಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಾತಿನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಆಗ್ರಹಿಸಿದರು.

ಮಂಗಳವಾರ ತಾಲೂಕು ಪಂಚಾಯಿತಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದ ಶೋಷಿತ ಬಡ ವರ್ಗದ ಜನರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಪೈಕಿ ಪಿಟಿಸಿಎಲ್ ಕಾಯ್ದೆ ಸಹ ಒಂದಾಗಿದೆ. ಈ ಕಾಯ್ದೆಯನ್ನು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರು. ಈ ಕಾಯ್ದೆ ಪ್ರಕಾರ ಶೋಷಿತ ಬಡ ವರ್ಗದ ಜನರಿಗೆ ಸರ್ಕಾರದಿಂದ ಮಂಜೂರಾದ ಭೂಮಿಯನ್ನು ಸರ್ಕಾರದ ಅನುಮತಿ ಇಲ್ಲದೆ ಯಾರು ಸಹ ಖರೀದಿಸುವಂತಿಲ್ಲ.

ಒಂದು ವೇಳೆ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸಾಲ ನೀಡಿ ಬಲವಂತವಾಗಿ ಭೂಮಿ ಬರೆಸಿಕೊಂಡಿದ್ದಲ್ಲಿ, ದಬ್ಬಾಳಿಕೆ ಅಥವಾ ಬೆದರಿಕೆ ಮೂಲಕ ಖರೀದಿಸಿದ್ದಲ್ಲಿ ಪುನಃ ಭೂಮಿಯನ್ನು ಮೂಲ ಮಂಜೂರುದಾರರಿಗೆ ಹಿಂದಿರುಗಿಸಬೇಕು. ಆದರೆ ಕಾಯ್ದೆ ಕುರಿತು ಅರಿವಿದ್ದರೂ ವಿನಾಕಾರಣ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸುವ ಮೂಲಕ ಬಡ ವರ್ಗದವರನ್ನು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ ಎಂದು ದೂರಿದರು. ಈ ನಡುವೆ ಈ ಕಾಯ್ದೆಯನ್ನು ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿ ವರ್ಗ ವಿಫಲವಾಗುತ್ತಿದ್ದು, ಬಹುತೇಕ ಪ್ರಕರಣಗಳಲ್ಲಿ ಈ ಕಾಯ್ದೆಯನ್ನು ಉಲ್ಲಂಘನೆ ಮಾಡುವ ಜೊತೆಗೆ ಮನಸ್ಸಿಗೆ ಬಂದಂತೆ ಆದೇಶಿಸಲಾಗುತ್ತಿದೆ. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಬಡ ವರ್ಗದವರನ್ನು ರಕ್ಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಹಿರಿಯ ಕಾರ್ಮಿಕ ಮುಖಂಡ ಡಿ.ಸಿ.ಮಾಯಣ್ಣ ಪ್ರತಿಭಟನಾ ಧರಣಿ ಸತ್ಯಾಗ್ರಹವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್, ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು. ಪ್ರಮುಖರಾದ ಅರುಣ್‌ಕುಮಾರ್, ಶಶಿಕುಮಾರ್ ಗೌಡ, ಎನ್.ಮಂಜುನಾಥ್, ವೈ.ಶಶಿಕುಮಾರ್, ಎಂ.ವಿ.ಚಂದ್ರಶೇಖರ್, ವಿ.ಈರೇಶ್, ಪತ್ರೇಶ್, ಸಂಗಮ್ಮ, ಮಂಜಮ್ಮ, ಸುವರ್ಣಮ್ಮ, ಕಮಲಮ್ಮ, ಗೌರಮ್ಮ, ಟಿ.ಶ್ವೇತ, ಪವಿತ್ರ, ಆಶಾ, ಎಸ್.ಈರೇಶ್, ರುದ್ರೇಶಪ್ಪ, ಸೀನಪ್ಪ, ಚಂದ್ರಮ್ಮ, ನಾಗರತ್ನಮ್ಮ, ಜಯಮ್ಮ, ಲಕ್ಷ್ಮಮ್ಮ ಸೇರಿದಂತೆ ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು, ಪಿಟಿಸಿಎಲ್ ಕಾಯ್ದೆಯಿಂದ ವಂಚಿತರಾದ ಫಲಾನುಭವಿಗಳು ಇದ್ದರು.