ಸಾರಾಂಶ
ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇ.ಪಿ.ಎಫ್ ಮತ್ತು ಪಿ.ಎಫ್. ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮತ್ತಿತರರು ಹಾಜರಿದ್ದರು.
ಹಾಸನ: ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ನಿಯೋಜನೆ ನಿಷೇಧ ಮತ್ತು ಅದರ ಪುನರ್ವಸತಿ ಅಧಿನಿಯಮ ೨೦೧೩ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಮತ್ತು ಸುರಕ್ಷತಾ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇ.ಪಿ.ಎಫ್ ಮತ್ತು ಪಿ.ಎಫ್. ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮತ್ತಿತರರು ಹಾಜರಿದ್ದರು.
;Resize=(128,128))
;Resize=(128,128))
;Resize=(128,128))