ಸಾರಾಂಶ
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆದು ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕು ಘಟಕ ಆಗ್ರಹಿಸಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಹಳಿಯಾಳ: ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆದು ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕ ಆಗ್ರಹಿಸಿದೆ.
ತಾಲೂಕ ವಿಶ್ವ ಹಿಂದೂ ಪರಿಷತ್ ಘಟಕದ ಅಧ್ಯಕ್ಷ ಶ್ರೀಪತಿ ಭಟ್ ಮುಂದಾಳತ್ವದಲ್ಲಿ ನಿಯೋಗವೊಂದು ತಾಲೂಕಾಡಳಿತ ಸೌಧಕ್ಕೆ ತೆರಳಿ, ಶಿರಸ್ತೇದಾರ ಹನುಮಂತ ಪರೋಡಕರ ಅವರಿಗೆ ಮನವಿ ಸಲ್ಲಿಸಿತು.ಬಾಂಗ್ಲಾದೇಶವು ಹಿಂಸಾಚಾರ ಮತ್ತು ಕಾನೂನುಬಾಹಿರತೆಯಿಂದ ಬಳಲುತ್ತಿದ್ದು, ಚುನಾಯಿತ ಪ್ರಧಾನಿ ರಾಜೀನಾಮೆ ನೀಡಿ ದೇಶವನ್ನು ತೊರೆದರು, ಅಲ್ಲಿನ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಇಂತಹ ಗೊಂದಲಮಯವಾದ ಕಠಿಣ ಪರಿಸ್ಥಿತಿಯಲ್ಲಿ ಅಲ್ಲಿನ ತೀವೃಗಾಮಿ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡಮಟ್ಟದಲ್ಲಿ ಕಿರುಕುಳ ಪ್ರಾರಂಭಿಸಿದೆ. ಇದರ ಪರಿಣಾಮ ಬಾಂಗ್ಲಾದೇಶಾದ್ಯಂತ ಹಿಂದೂಗಳ ಮೇಲೆ, ಅವರ ಧಾರ್ಮಿಕ ಶ್ರದ್ಧಾಕೇಂದ್ರಗಳು, ವ್ಯಾಪಾರ ವಹಿವಾಟಿನ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ನಷ್ಟವನ್ನುಂಟು ಮಾಡಿದ್ದಾರೆ.
ಬಾಂಗ್ಲಾದೇಶದಲ್ಲಿನ ಹಿಂದೂ ಧರ್ಮೀಯರ ರಕ್ಷಣೆಗಾಗಿ, ಸುರಕ್ಷತೆಗಾಗಿ ಅವರ ಹಕ್ಕುಗಳ ಸಂರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದಿರುವ ಹತ್ಯಾಕಾಂಡಗಳನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಬಾಂಗ್ಲಾದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಸರ್ಕಾರವನ್ನು ಆದಷ್ಟು ಬೇಗ ಪುನರ್ ಸ್ಥಾಪಿಸಿ, ಅಲ್ಲಿರುವ ಹಿಂದೂ ಧರ್ಮೀಯರ ಮಾನವ ಹಕ್ಕುಗಳ ಸಂರಕ್ಷಣೆಗೆ ಮೊದಲ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.ತಾಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಪತಿ ಭಟ್, ಜಿ.ಡಿ. ಗಂಗಾಧರ, ಸೂರ್ಯವಂಶಿ, ವಿನೋದ ಗಿಂಡೆ ಇದ್ದರು.