ವಿಐಎಸ್ಎಲ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಸಿಂಧಿಯಾಗೆ ಶಾ ಪತ್ರ

| Published : Feb 09 2024, 01:45 AM IST

ವಿಐಎಸ್ಎಲ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಸಿಂಧಿಯಾಗೆ ಶಾ ಪತ್ರ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನರುಜ್ಜೀವನಗೊಳಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ.13ರಂದು ಮನವಿ ಸಲ್ಲಿಸಿದ್ದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪತ್ರ ಬರೆದು ಕ್ರಮಕ್ಕೆ ಕೋರಿದ್ದಾರೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾರಿಗೆ ಗೃಹ ಸಚಿವ ಅಮಿತ್ ಶಾ ಪತ್ರ ಬರೆದಿದ್ದಾರೆ.

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನರುಜ್ಜೀವನಗೊಳಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ.13ರಂದು ನನಗೆ ಮನವಿ ಸಲ್ಲಿಸಿದ್ದಾರೆ.

ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್.ಎಂ ವಿಶ್ವೇಶ್ವರಾಯ ಅವರ ದೂರದೃಷ್ಟಿ ಹಾಗೂ ಪರಿಶ್ರಮದಿಂದ 1918ರಲ್ಲಿ ಶಿವಮೊಗ್ಗ ಜಿಲ್ಲೆ, ಭದ್ರಾವತಿಯಲ್ಲಿ ಸ್ಥಾಪನೆಗೊಂಡಿದ್ದು, ಐತಿಹಾಸಿಕ ಮಹತ್ವ ಹೊಂದಿರುವುದಲ್ಲದೆ ದೇಶದ ಕೈಗಾರಿಕಾ ಕ್ರಾಂತಿಯ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದೆ.ಕೇಂದ್ರ ಸರ್ಕಾರ ವಿಐಎಸ್ಎಲ್ ಸೇರಿದಂತೆ 2016 ರ ವರ್ಷದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನ ಮೂರು ಘಟಕಗಳ ಹೂಡಿಕೆ ಹಿಂಪಡೆಯಲು ಅನುಮೋದನೆ ನೀಡಿದೆ. ಅಲ್ಲದೆ ಇದೀಗ ಮುಚ್ಚುವ ತೀರ್ಮಾನ ಕೈಗೊಂಡಿದೆ. ಪ್ರಸ್ತುತ ಕಾರ್ಖಾನೆ ಬಳ್ಳಾರಿ ಜಿಲ್ಲೆಯಲ್ಲಿ 150 ಎಕರೆ ಸ್ವಂತ ಆದಿರಿನ ಗಣಿ ಹೊಂದಿದೆ. ಇದು 2025ರಿಂದ ಕಾರ್ಯಾರಂಭಗೊಳ್ಳಲಿದ್ದು, ಕಾರ್ಖಾನೆ ಪುನರುಜ್ಜೀವನಗೊಳಿಸಲು ಅವಕಾಶವಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಫೆ 2ರಂದು ಗೃಹ ಸಚಿವರು ಪತ್ರ ಬರೆದು ಕೋರಿದ್ದಾರೆ.