ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಮಸ್ಯೆ ಹೆಚ್ಚಾಗಿರುವ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ರೂಪದಲ್ಲಿ ಪಡೆದು ನೀರು ಪೂರೈಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸೂಚಿಸಿದರು.

ಹಾವೇರಿ: ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಮಸ್ಯೆ ಹೆಚ್ಚಾಗಿರುವ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ರೂಪದಲ್ಲಿ ಪಡೆದು ನೀರು ಪೂರೈಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸೂಚಿಸಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಾವೇರಿ ತಾಲೂಕಿನ ಬ್ಯಾಡಗಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಉಂಟಾಗಬಾರದು. ಅಲ್ಲದೇ ನೀರಿನ, ಮನೆ ಕರವನ್ನು ಸರಿಯಾಗಿ ವಸೂಲಿ ಮಾಡಬೇಕು. ಇತ್ತೀಚೆಗೆ ಬೀಸಿದ ಭಾರಿ ಗಾಳಿಗೆ ಕೆಲ ಹಳ್ಳಿಗಳ ಸರ್ಕಾರಿ ಶಾಲೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಅಂಥ ಶಾಲೆಗಳನ್ನು ರಜಾ ಅವಧಿಯಲ್ಲಿ ದುರಸ್ತಿ ಮಾಡಬೇಕು ಎಂದು ಸೂಚಿಸದರು. ಸಭೆಯಲ್ಲಿ ತಹಸೀಲ್ದಾರ್ ಶರಣಮ್ಮ, ತಾಪಂ ಇಒ ಡಾ. ಪಿ.ಎನ್. ಹುಬ್ಬಳ್ಳಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.