ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ

| Published : Jul 16 2024, 12:36 AM IST

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾ ಅಂತರ್‌ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಿಸಿ ನಿತೀಶ್‌ ಕೆ.ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲೆಯಲ್ಲಿ ಡೆಂಘೀ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಅಂತರ್‌ ಇಲಾಖೆಗಳ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದ ಅವರು, ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಜಾಗೃತಿಯನ್ನು ಹೆಚ್ಚಿನ ಮಟ್ಟದಲ್ಲಿ ಮೂಡಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಮಾಡುವ ವಾಹನದಲ್ಲಿ ದಿನವು ಡೆಂಘೀ ನಿಯಂತ್ರಣದ ಬಗ್ಗೆ ನೀಡಿರುವ ಆಡಿಯೋ ತುಣುಕುಗಳನ್ನು ಪ್ರಸಾರ ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ಆರೋಗ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಗ್ರಾಮದ ನೈರ್ಮಲ್ಯತೆ ಹಾಗೂ ಗ್ರಾಮದಲ್ಲಿರಬಹುದಾದ ಸಾಂಕ್ರಾಮಿಕ ರೋಗಗಳ ಪರಿಸ್ಥಿತಿ ಹಾಗೂ ಹತೋಟಿಯ ಬಗ್ಗೆ ಚರ್ಚಿಸಬೇಕು ಹಾಗೂ ಗ್ರಾಪಂಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ನಡೆಸಬೇಕು ಎಂದರು.

ಅಂಗನವಾಡಿ ಕಾರ್ಯಕರ್ತೆಯರು ವೈಯುಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಅಂಗನವಾಡಿ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದು ಅಲ್ಲದೆ ಸ್ವಚ್ಛತೆ ಹಾಗೂ ನೈರ್ಮಲ್ಯತೆಯಿಂದ ನೋಡಿಕೊಳ್ಳಬೇಕು. ಈ ಕುರಿತು ಅಗತ್ಯ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಡಿಸಿ ನಿರ್ದೇಶಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕರಾಮ್, ಲಿಂಗಸೂಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ, ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸೇರಿ ವಿವಿದ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.