ಕಾಲಮಿತಿಯಲ್ಲಿ ದೌರ್ಜನ್ಯ ಪ್ರಕರಣ ಇತ್ಯರ್ಥ ಪಡಿಸಲು ಕ್ರಮವಹಿಸಿ

| Published : Oct 30 2024, 12:46 AM IST

ಕಾಲಮಿತಿಯಲ್ಲಿ ದೌರ್ಜನ್ಯ ಪ್ರಕರಣ ಇತ್ಯರ್ಥ ಪಡಿಸಲು ಕ್ರಮವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ಥರಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.

ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಜಿಲ್ಲಾ ಮಟ್ಟದಲ್ಲಿ ಸೇರಿದಂತೆ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಮಾಹಿತಿಯನ್ನೊಳಗೊಂಡ ಫಲಕವನ್ನು ೧೦ ದಿನಗಳೊಳಗಾಗಿ ಅಳವಡಿಸಬೇಕು ಎಂದು ತಿಳಿಸಿದರು.ಅಂಗನವಾಡಿಯಲ್ಲಿ ಕಟ್ಟಡ, ಅಂಗನವಾಡಿಯಲ್ಲಿ ನೇಮಕಾತಿ, ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸುವುದು, ರಸ್ತೆ ಅತಿಕ್ರಮಣ ತೆರವು, ಪರಿಶಿಷ್ಟ ಜಾತಿ, ಪಂಗಡದ ನೌಕರರ ಮುಂಬಡ್ತಿ, ಸಮುದಾಯ ಭವನ ನಿರ್ಮಾಣ, ವಿದ್ಯುತ್ ಸಂಪರ್ಕ, ಭೂ ಒಡೆತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಈ ಕುರಿತು ಜಿಲ್ಲಾಧಿಕಾರಿಗಳು, ಅತ್ಯಂತ ತ್ವರಿತವಾಗಿ ಈ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.ಅಭಿಷೇಕ ಚಕ್ರವರ್ತಿ ಮಾತನಾಡಿ, ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಗ್ರಾಮಮಟ್ಟದಲ್ಲಿ ಹಮ್ಮಿಕೊಂಡು, ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಕಾರ್ಯಕ್ರಮದ್ದ ಉದ್ದೇಶ ಸಾಕಾರಗೊಳಿಸಬೇಕು. ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿ.ಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‌ಕುಮಾರ ಗುಣಾರಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್‌ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾ ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ರವಿಕಾಂತ ಬಿರಾದಾರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.