ಸಾರಾಂಶ
ಸರ್ಕಾರದ ಸೌಲಭ್ಯಗಳನ್ನು ಸದ್ವಿನಿಯೋಗ ಮಾಡಿಕೊಂಡು ವಿದ್ಯಾಭ್ಯಾಸಕ್ಕೆ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ಕನ್ನಡಪ್ರಭ ವಾರ್ತೆ
ಸರ್ಕಾರದ ಸೌಲಭ್ಯಗಳನ್ನು ಸದ್ವಿನಿಯೋಗ ಮಾಡಿಕೊಂಡು ವಿದ್ಯಾಭ್ಯಾಸಕ್ಕೆ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪಠ್ಯೇತರ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪಠ್ಯ ಅಲ್ಲದೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ಇದರಿಂದ ನಿಮ್ಮಲ್ಲಿ ಕಲಿಕೋತ್ಸಾಹ ಹೆಚ್ಚಲಿದೆ. ಗ್ರಾಮೀಣ ಮಕ್ಕಳಲ್ಲಿ ಕಲಾ ಪ್ರತಿಭೆಗಳಿದ್ದು ಅಭಿರುಚಿಗೆ ತಕ್ಕಂತ ಕಲೆಗಳನ್ನು ಅನಾವರಣಗೊಳಿಸುವಂತಾಗಬೇಕು. ಸರ್ಕಾರ ಬಡ ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆಗಳನ್ನು ಜಾರಿ ಮಾಡಿ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.ಎಸ್. ಎಸ್.ಎಲ್.ಸಿ ನಂತರ ವಿದ್ಯಾಭ್ಯಾಸ ಮೊಟಕು ಗೊಳಿಸದೆ ಸರ್ಕಾರದ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾಭ್ಯಾಸದತ್ತ ಗಮನಹರಿಸಿ ನಿಮ್ಮ ಬದುಕಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.ಇದೇ ವೇಳೆ ವಿವಿಧ ಕಲಾ ಪ್ರಕಾರಗಲ್ಲಿ ಜಯಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜ್ಯೂನಿಯರ್ ಕಾಲೇಜು ಪ್ರಾಂಶುಪಾಲ ಗೋವಿಂದಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಖಾದರ್, ನಿವೃತ್ತ ಮುಖ್ಯೋಪಾಧ್ಯಾಯ ಎಂ.ಡಿ. ಲತಿಪ್ ಸಾಬ್, ಉಪನ್ಯಾಸಕ ಬಿ.ಏನ್. ತಿಪ್ಪೇಸ್ವಾಮಿ, ಕೊಂಡ್ಲಹಳ್ಳಿ ಜೂನಿಯರ್ ಕಾಲೇಜು, ಪ್ರಾಂಶುಪಾಲ ಸಣ್ಣ ಪಾಲಯ್ಯ, ರಾಂಪುರ ಎಸ್.ಪಿ.ಎಸ್.ಆರ್ ಕಾಲೇಜಿನ ಡಿ. ತಿಮ್ಮಣ್ಣ, ಉಪನ್ಯಾಸಕರಾದ ಸುಮಾ , ಉಜ್ಜಿನಪ್ಪ, ಮುಖಂಡ ಅಪ್ಪಿ ಭೀಮಣ್ಣ ಇದ್ದರು.