ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ನೀಡುವಂತಹ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸ್ಥಾನವನ್ನು ಪಡೆಯಬೇಕು. ಪಠ್ಯಚಟುವಟಿಕೆ ಜೊತೆಯಲ್ಲಿ ಉದ್ಯೋಗಾಧಾರಿತ ಕೌಶಲ್ಯಗಳ ತರಬೇತಿಯನ್ನು ಪಡೆಯಬೇಕು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿರಾ ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೌಶಲ್ಯಾಧಾರಿತ ತರಬೇತಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭವಾದರೆ ಅನುಕೂಲವಾಗಲಿದೆ ಎಂದರು. ಸಾಂಸ್ಕೃತಿಕಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ.ಶೋಭಾ ಮಾತನಾಡಿ ಸರ್ಕಾರ ವಿದ್ಯಾರ್ಥಿಗಳ ಕಲಿಕೆಗಾಗಿ ಸಾಕಷ್ಟು ಉಪಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಸರ್ಕಾರ ನೀಡುವಂತಹ ಎಲ್ಲಾ ಕಾರ್ಯಕ್ರಮಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರ ಮೂಲಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಬೇಕು ಎಂದರು. ಚಲನಚಿತ್ರ ನಟ ಹನುಮಂತೇಗೌಡ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ವೃದ್ಧಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು. ಧಾರವಾಡದ ಉಜ್ವಲ ಅಕಾಡೆಮಿಯ ನಿರ್ದೇಶಕರಾದ ಮಂಜುನಾಥ್ಮಾ ತನಾಡಿ ಉದ್ಯೋಗಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ಪ್ಲೇಸ್ಮೆಂಟ್ ಸೆಲ್ನ ಮಾರ್ಗದರ್ಶನವನ್ನು ಕಡ್ಡಾಯವಾಗಿ ಪಡೆಯಬೇಕೆಂದು ತಿಳಿಸಿದರು. ಜೀನಿ ಸಂಸ್ಥೆಯ ಸಂಸ್ಥಾಪಕರಾದ ದಿಲೀಪ್ ಕುಮಾರ್ ಮಾತನಾಡಿದರು. ವಿದ್ಯಾರ್ಥಿಗಳು ವ್ಯಾಸಂಗ ಮುಗಿದ ನಂತರ ನಿರುದ್ಯೋಗಿಗಳಾಗದೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಮೂಲಕ ಸ್ವಯಂ ಉದ್ಯೋಗಗಳನ್ನು ಪ್ರಾರಂಭಿಸಿ ನಮ್ಮ ಭವಿಷ್ಯವನ್ನು ನಾವೇ ನಿರ್ಮಾಣ ಮಾಡಿಕೊಳ್ಳುವಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತಷ್ಟು ತೊಡಗಿಕೊಳ್ಳುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಹೆಚ್ಚಿನ ಫಲಿತಾಂಶವನ್ನು ತರಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ಹೊನ್ನಾಂಜಿನಯ್ಯ.ಡಿ.ಆರ್., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಶಿವಣ್ಣ, ಪ್ರಾಧ್ಯಾಪಕರಾದ ಗೋವಿಂದರಾಜು, ಡಾ. ವೆಂಕಟರಮಣಪ್ಪ, ಹರೀಶ್, ಧರಣಿ ಕುಮಾರಿ, ಶೋಭಾ, ಶಾಂತಕುಮಾರಿ, ತಿರುಮಲ, ನಾಗರಾಜು ಎನ್, ನಳಿನ, ವಿಜಯ್ ಕುಮಾರ್, ಐಕ್ಯೂಎಸಿ ಸಂಚಾಲಕ ಡಾ ಗಿರೀಶ್.ಡಿ, ಸುಕನ್ಯ, ಗಂಗಾಧರ್, ಪತ್ರಾಂಕಿತ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ, ನರೇಂದ್ರಬಾಬು ಸೇರಿದಂತೆ ಹಲವರು ಹಾಜರಿದ್ದರು.
;Resize=(128,128))
;Resize=(128,128))
;Resize=(128,128))