ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ವಿರಕ್ತಮಠದ ಚನ್ನವೀರ ಸ್ವಾಮೀಜಿ

| Published : Jan 18 2024, 02:01 AM IST

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ವಿರಕ್ತಮಠದ ಚನ್ನವೀರ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು.

ಕನ್ನಡಪ್ರಭ ವಾರ್ತೆ ಸವಣೂರು

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೂವಿನಶಿಗ್ಲಿಯ ವಿರಕ್ತಮಠದ ಚನ್ನವೀರ ಸ್ವಾಮೀಜಿ ಹೇಳಿದರು.

ಇಲ್ಲಿನ ಮಠದ ಆವರಣದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ನಡೆದ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟದ ಸಂತೆ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ)ಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ. ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ವಲಯ ಮೇಲ್ವಿಚಾರಕ ಮಾಲತೇಶ ಮಟಿಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಮಾಸಿಕ ಸಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮವ್ವ ಗಡ್ಡೆಣ್ಣವರ, ಒಕ್ಕೂಟದ ಅಧ್ಯಕ್ಷೆ ರೇಖಾ ನಿಂಬಣ್ಣವರ, ಕಾರ್ಯದರ್ಶಿ ಮುತ್ತವ್ವ ಚಪ್ಪರದ, ಶಿವಾನಂದ ಕಟ್ಟಿಮನಿ, ಪ್ರಶಾಂತಗೌಡ ಪಾಟೀಲ, ಖಜಾಂಚಿ ಮೈರುನಾ ಜಾಪರನ್ನವರ, ಗ್ರಾಪಂ ಕಾರ್ಯದರ್ಶಿ ವೀರೇಶ ಕಮ್ಮಾರ್, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ನಂದಾ ಇಮ್ರಾಪೂರ ಸ್ವಾಗತಿಸಿದರು. ಲಕ್ಷ್ಮವ್ಚ ಕುರಿ ನಿರೂಪಿಸಿದರು.