ಗುಣಾತ್ಮಕ ಶಿಕ್ಷಣದ ಸದುಪಯೋಗ ಪಡೆಯಿರಿ-ಶಾಸಕ ಲಮಾಣಿ

| Published : Sep 02 2024, 02:01 AM IST

ಸಾರಾಂಶ

ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಉನ್ನತ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ ಎಂದು ವಿಧಾನಸಭಾ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಉನ್ನತ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ ಎಂದು ವಿಧಾನಸಭಾ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.ಸ್ಥಳೀಯ ಬಸವೇಶ್ವರ ನಗರದ ೧೨ನೇ ಕ್ರಾಸ್‌ನಲ್ಲಿರುವ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕಳೆದ ವರ್ಷ ಉತ್ತಮ ಫಲಿತಾಂಶ ಪಡೆದ ಹಾಗೂ ನೀಟ್, ಜೆಇಇ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ೨೦೨೩-೨೪ನೇ ಸಾಲಿನಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ನಿಖಿತಾ ಕ್ವಾಟಿ, ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಪವನ ಲಮಾಣಿ, ಜೆಇಇ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದ ಕಾರ್ತಿಕ ಹಿರೇಮಠ, ಭೂಮಿಕಾ ಎಸ್, ಚನ್ನಮ್ಮ ಬೂದಿಹಾಳ, ಅನುಪಮಾ ಹುಲ್ಲತ್ತಿ, ರಕ್ಷಿತಾ ಆರ್ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.ಪ್ರಾಚಾರ್ಯ ರವಿಕುಮಾರ ಪೂಜಾರ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಶ್ರೇಷ್ಠ ಗುರಿಯಾಗಿದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಫಲಿತಾಂಶ ಸಾಧಿಸಲು ನಮ್ಮ ಕಾಲೇಜನ ಎಲ್ಲಾ ಉಪನ್ಯಾಸಕರು ಶ್ರಮವಹಿಸುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದರೆ ಅದುವೇ ನೀವು ನಮಗೆ ನೀಡುವ ಕೊಡುಗೆಯಾಗಲಿದೆ ಎಂದರು.ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಗಣ್ಯರಾದ ಎಂ.ಎಂ. ಮೈದೂರ, ಅಬ್ದುಲ್ ಹುಬ್ಬಳ್ಳಿ, ಉಪನ್ಯಾಸಕರಾದ ಪ್ರಮೋದ ಬಣಕಾರ, ನೀತಾ ಬಳ್ಳಾರಿ, ರಂಜಿತಾ ಎಂ. ಹಾಗೂ ಇತರೆ ಬೋಧಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.