ಸಾರಾಂಶ
ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ಬಡ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸಂಪೂರ್ಣ ಪಠ್ಯ ವಿಷಯ ಬೋಧನಾ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.
ಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ಬಡ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸಂಪೂರ್ಣ ಪಠ್ಯ ವಿಷಯ ಬೋಧನಾ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.ಶನಿವಾರ ಡಾ. ಚಂದ್ರು ಲಮಾಣಿ ಅಭಿಮಾನ ಬಳಗದ ವತಿಯಿಂದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ
ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.ಬಡ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡುವ ಮೂಲಕ ಉನ್ನತ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದ ಬಡ ರೈತರು ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು.ಕಳೆದ ಐದು ವರ್ಷಗಳಿಂದ ನಡೆಸುತ್ತಿರುವ ಬೇಸಿಗೆ ಶಿಬಿರದಲ್ಲಿ ಅಭ್ಯಾಸ ಮಾಡಿ ಅನೇಕ ವಿದ್ಯಾರ್ಥಿಗಳು ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.ಈ ವೇಳೆ ತಹಸೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪಠ್ಯ ಶಿಬಿರ ಹಮ್ಮಿಕೊಂಡಿರುವು ಸ್ವಾಗತಾರ್ಹ ಸಂಗತಿಯಾಗಿದೆ. ಬಡ ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ಕಲಿತು ಉನ್ನತ ಅಂಕಗಳಿಸಬಹುದಾಗಿದೆ. ಬಡತನವು ಕಲಿಕೆಗೆ ಎಂದೂ ಅಡ್ಡಿಯಾಗುವುದಿಲ್ಲ. ಬಡತನವು ಮೆಟ್ಟಿ ನಿಲ್ಲುವ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆ ಹೊರತರುವ ಕಾರ್ಯ ಮಾಡಬೇಕು. ಅಂದಿನ ಪಾಠವನ್ನು ಅಂದೇ ಪುನರ್ ಮನನ ಮಾಡಬೇಕು ಇದರಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂದು ಹೇಳಿದರು.ಶಿರಹಟ್ಟಿ ಬಿಇಓ ಎಚ್.ಎನ್. ನಾಯ್ಕ್, ಗದಗ ಗ್ರಾಮೀಣ ಬಿಇಒ ವಿ.ವಿ. ನಡುವಿನಮನಿ ಮಾತನಾಡಿದರು.ಪ್ರಾಸ್ತಾವಿಕವಾಗಿ ರಮೇಶ ನವಲೆ ಮಾತನಾಡಿದರು. ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ, ನವೀನ ಬೆಳ್ಳಟ್ಟಿ, ಈರಣ್ಣ ಗಾಣಿಗೇರ ಇದ್ದರು. ಶಿಬಿರದಲ್ಲಿ ಶ್ವೇತಾ ಅಂಬಲಿ, ದೀಪಾ ಕರಾಟೆ, ಶಿವಪ್ರಕಾಶ್ ಗುಡಗೇರಿ, ಸತೀಶ್ ಬೋಮಲೆ, ಗಿರೀಶ್ ಗುಡಗೇರಿ ಇದ್ದರು.