ವಸ್ತು ಪ್ರದರ್ಶನ ಪ್ರಯೋಜನ ಪಡೆದುಕೊಳ್ಳಿ

| Published : Oct 11 2025, 12:02 AM IST

ವಸ್ತು ಪ್ರದರ್ಶನ ಪ್ರಯೋಜನ ಪಡೆದುಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಹಾಸನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾದಂತಹ ಉತ್ಪನ್ನಗಳನ್ನು ಖರೀದಿಸಲು ಒಂದು ಸುವರ್ಣಾವಕಾಶ, ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ ಮತ್ತಿತರ ಇಲಾಖೆಗಳಿಂದ ರೈತರಿಗೆ ಬೇಕಾದಂತಹ ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ನೀಡಲಾಗುತ್ತಿದೆ ಎಂದರು.

ಹಾಸನ: ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವಸ್ತು ಪ್ರದರ್ಶನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದ ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಹಾಸನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾದಂತಹ ಉತ್ಪನ್ನಗಳನ್ನು ಖರೀದಿಸಲು ಒಂದು ಸುವರ್ಣಾವಕಾಶ, ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ ಮತ್ತಿತರ ಇಲಾಖೆಗಳಿಂದ ರೈತರಿಗೆ ಬೇಕಾದಂತಹ ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ನೀಡಲಾಗುತ್ತಿದೆ ಎಂದರು.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳು ದೇವಿಯ ದರ್ಶನ ಪಡೆಯುವುದರ ಜೊತೆಗೆ ಇಲ್ಲಿಯ ಜಾನಪದ ಕಲೆ, ಸಂಗೀತದ ರಸದೌತಣವನ್ನು ಸವಿಯಲು ಅನುಕೂಲವಾಗುವಂತೆ ನಗರದ ನಾಲ್ಕು ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಸಾರ್ವಜನಿಕರು ಕೂಡಾ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ತಿಳಿಸಿದರು.

ಈ ವೇಳೆಯಲ್ಲಿ ಸಂಸದರಾದ ಶ್ರೇಯಸ್ ಎಂ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್‌ ಮತ್ತಿತರರು ಹಾಜರಿದ್ದರು.