ಸೌಲಭ್ಯದ ಸದುಪಯೋಗಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಡಾ.ಕೆ.ಜಿ.ಚವಾಣ್‌ಕೀರ್ತಿ ತಂದು ಸಮಾಜಕ್ಕೆ ಮಾದರಿ ಪ್ರಜೆಯಾಗಬೇಕು

ಕನ್ನಡಪ್ರಭ ವಾರ್ತೆ, ತರೀಕೆರೆ

ಕಾಲೇಜಿನಲ್ಲಿರುವ ಎಲ್ಲಾ ಸೌಲಭ್ಯಗಳ ಸದುಪಯೋಗಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡು ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತಂದು ಸಮಾಜಕ್ಕೆ ಮಾದರಿ ಪ್ರಜೆಯಾಗಬೇಕು ಎಂದು ಪಟ್ಟಣದ ಎಸ್ ಜೆಎಂ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಚವಾಣ್ ಹೇಳಿದ್ದಾರೆ.

ಎಸ್ ಜೆಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಬಿ.ಎ./ಬಿ.ಕಾಂ. ವಿದ್ಯಾರ್ಥಿಗಳಿಗೆ ನಡೆದ ಓರಿಯಂಟೇಷನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್ ಜೆಎಂ ಪ್ರಥಮ ದರ್ಜೆ ಮಹಾ ವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಡಾ.ಸದಾಶಿವನಾಯ್ಕ ಎ. ಮಾತನಾಡಿ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು, ಉದ್ಯೋಗ ಮಾಹಿತಿ ಮತ್ತು ಗ್ರಂಥಾಲಯದಲ್ಲಿರುವ ಕಲಿಕಾ ಸಂಪನ್ಮೂಲಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಹೇಗೆ ಬಳಸಬೇಕೆಂದು ವಿವರಿಸಿದರು. ಯುವ ರೆಡ್‌ಕ್ರಾಸ್ ಘಟಕದ ಕುರಿತು ತಿಳಿಸಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಲು ಕರೆ ನೀಡಿದರು. ಡಾ.ಅನಿಲ್‌ಕುಮಾರ್, ಮುಖ್ಯಸ್ಥರು, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಅನಿಲ್ ಕುಮಾರ್‌ ಮಾತನಾಡಿ ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿ, ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ, ಕಿರುಪರೀಕ್ಷೆ ಹಾಗೂ ಪಾಠ ಪ್ರವಚನಗಳ ಬಗ್ಗೆ ತಿಳಿಸಿಕೊಟ್ಟರು.

ದೈಹಿಕ ಶಿಕ್ಷಣ ನಿರ್ದೇಶಕ ಜೆ.ರಘು ಮಾತನಾಡಿ, ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ ಪಾಠದ ಜೊತೆಗೆ ಆಟವಾಡುವುದೂ ಕೂಡ ಅಷ್ಟೇ ಮುಖ್ಯ. ದೈಹಿಕ, ಮಾನಸಿಕ, ಬೌದ್ಧಿಕವಾಗಿ ಸದೃಢರಾಗುವುದು ಮುಖ್ಯ ಎಂದ ಅವರು ರಾಷ್ಟ್ರೀಯ ಸೇವಾ ಯೋಜನೆ ಧ್ಯೇಯೋದ್ಯೇಶಗಳನ್ನು ತಿಳಿಸಿಕೊಟ್ಟರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕು.ಅಂಜುಮ್ ಸುಲ್ತಾನಾ ಮಾತನಾಡಿ ವಾಣಿಜ್ಯಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಹಲವು ವಿಷಯ ತಿಳಿಸಿ, ವಾಣಿಜ್ಯ ಪದವಿ ನಂತರದ ಉದ್ಯೋಗಾವಕಾಶಗಳ ಹಾಗೂ ಮಾನವಿಯ ಮೌಲ್ಯಗಳ ಬಗ್ಗೆ ಮಾತನಾಡಿದರು.

ಇತಿಹಾಸ ಉಪನ್ಯಾಸಕರಾದ ರಜಿತ ಮಾತನಾಡಿ ಮಹಾವಿದ್ಯಾಲಯದ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ತಿಳಿಸಿ,. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತರಲು ಕರೆ ನೀಡಿದರು.

ಡಾ.ಅನಿಲ್‌ಕುಮಾರ್, ಜೆ.ರಘು ಇದ್ದರು. 25ಕೆಟಿಆರ್.ಕೆ8ಃ

ತರೀಕೆರೆಯಲ್ಲಿ ಎಸ್ ಜೆಎಂ ಪ್ರಥಮ ದರ್ಜೆ ಕಾಲೇಜಿನಿಂದ ಓರಿಯಂಟೇಶನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.