ಸರ್ಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ: ಎಚ್.ವಿಶ್ವನಾಥ್

| Published : Jul 15 2025, 01:00 AM IST

ಸರ್ಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ: ಎಚ್.ವಿಶ್ವನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಎಲ್ಲಾ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಎಲ್ಲಾ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಂಗಳೂರು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಸಮಗ್ರ ಶಿಕ್ಷಣ ಅಭಿಯಾನ ಕರ್ನಾಟಕದಿಂದ ಶಾಲೆಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಯಾವುದೇ ತಾರತಮ್ಯವಿಲ್ಲದೆ ಶಿಕ್ಷಣ ನೀಡುವಂತತಹದ್ದು ನಮ್ಮ ಸರ್ಕಾರಿ ಶಾಲೆಗಳು, ಹಾಗಾಗಿ ಪೋಷಕರೆಲ್ಲರೂ ಕೂಡ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ಓದಿಸಬೇಕು ಎಂದ ಅವರು ಶಾಲೆಯಲ್ಲಿ ನುರಿತ ಶಿಕ್ಷಕರಿದ್ದು ಉತ್ತಮ ಶಿಕ್ಷಣ ನೀಡುತ್ತಿದ್ದಾರೆ ಎಂದು ಹೇಳಿದರು.ತಾಲೂಕು ಲೆಕ್ಕ ಪರಿಶೋಧನಾಧಿಕಾರಿಗಳಾದ ನಗೀನಾ, ಮಾತನಾಡಿ ಮಕ್ಕಳು ಸಮಗ್ರ ಶಿಕ್ಷಣದಲ್ಲಿ ಮಕ್ಕಳ ಕಲಿಕೆ ಗುಣಮಟ್ಟದಿಂದ ಇರಬೇಕು. ಒಂದಕ್ಕೊಂದು ಪೂರಕ ಇರಬೇಕು, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಜೊತೆಗೂಡಿ ಒಂದಾಗಿ ಸಾಗಬೇಕು, ಹೀಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ, ಅವುಗಳನ್ನು ನಾವು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಬಹಳ ಮುಖ್ಯ. ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ನಮ್ಮ ಇಲಾಖೆಯಿಂದ ಶಾಲೆಗೆ ಅಗತ್ಯ ಅನುಕೂಲ ಮಾಡಿಕೊಡುವಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಇರುತ್ತದೆ ಎಂದು ಹೇಳಿದರು.ಮುಡುಗೋಡು ಗ್ರಾಪಂ ಅಧ್ಯಕ್ಷೆ ರೂಪ, ಎಸ್ಡಿಎಂಸಿ ಸದಸ್ಯರಾದ ರಫೀಕ್, ವೇದಾವತಿ, ಪ್ರಭಾರಿ ಮುಖ್ಯ ಶಿಕ್ಷಕ ಶಿವಾನಂದ್, ಶಿಕ್ಷಕಿಯರಾದ ಶಾಂತಕುಮಾರಿ, ರಮ್ಯ ಅಂಬಿಕಾ ಸಹ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.13ಕೆಟಿಆರ್.ಕೆ.6ಃ

ತರೀಕೆರೆ ಸಮೀಪದ ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್, ಮುಡುಗೋಡು ಗ್ರಾಪಂ ಅಧ್ಯಕ್ಷೆ ರೂಪ ತಾಲೂಕು ಲೆಕ್ಕ ಪರಿಶೋಧನಾಧಿಕಾರಿ ನಗೀನಾ ಮತ್ತಿತರರು ಇದ್ದರು.