ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ: ಕಾಂತ ನಾಯಕ್

| Published : Aug 27 2024, 01:32 AM IST

ಸಾರಾಂಶ

ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡಪ್ರಭವಾರ್ತೆ ಚನ್ನಪಟ್ಟಣ

ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ. ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು.ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರ ಅಭಿವೃದ್ಧಿಗೆ ಹಾಗೂ ಯುವಜನರನ್ನು ಸದೃಢಗೊಳಿಸಲು ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ನಿರುದ್ಯೋಗಳಿಗೆ ಉದ್ಯೋಗ ಒದಗಿಸಲು ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಸಲಾಗಿದ್ದು, ಇದನ್ನು ನಿರುದ್ಯೋಗಿಗಳು ಸದುಪಯೋಗಪಡಿಸಿಕೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂದರು.ಆ.೩೦ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಚನ್ನಪಟ್ಟಣದಲ್ಲಿ ಬಹೃತ್ ಉದ್ಯೋಗ ಮೇಳ ಆಯೋಜಿಸಿಲಾಗಿದ್ದು, ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬೆಳಗ್ಗೆ ೧೦ಗಂಟೆಯಿಂದ ಸಂಜೆ ೬ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ ಎಂದು ತಿಳಿಸಿದರು. ೧೮೦ಕಂಪನಿಗಳು ಭಾಗಿ: ಉದ್ಯೋಗ ಮೇಳದಲ್ಲಿ ಟೊಯೋಟೊ ಕಿರ್ಲೋಸ್ಕರ್, ಕೋಶಾ ಟೆಕ್ ಹಬ್, ಲುಬ್ಯಾಕ್ಸ್, ಎಚ್‌ಇಎಲ್, ಎಚ್‌ಡಿಎಫ್‌ಸಿ ಸೇರಿದಂತೆ ಸುಮಾರು ೧೮೦ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. ಸುಮಾರು ೨೯ ಸೆಕ್ಟರ್‌ಗಳಲ್ಲಿ ೧೦ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದು, ನಿರುದ್ಯೋಗಿಗಳು ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ೧೮ವರ್ಷದಿಂದ ೩೫ವರ್ಷದೊಳಗಿನ ಎಲ್ಲರೂ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದರು.೫೨೦೦ ಮಂದಿ ನೋಂದಣಿ: ಚನ್ನಪಟ್ಟಣದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗಿಯಾಗಲು ಈಗಾಗಲೇ ೨೭೦೦ ಯುವತಿಯರು ಹಾಗೂ ೨೫೦೦ ಯುವಕರು ಸೇರಿದಂತೆ ೫೨೦೦ ಮಂದಿ ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆ ಮಾತ್ರವಲ್ಲದೇ ಹೊರ ಜಿಲ್ಲೆಯವರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನು ಮೂರು ದಿನಗಳ ಕಾಲ ನೋಂದಣಿ ಕಾರ್ಯ ನಡೆಯಲಿದೆ. ಹೆಸರು ನೋಂದಣಿ ಮಾಡಿಕೊಳ್ಳದೇ ಬರುವವರು ನೋಂದಣಿಗೆ ಮೇಳದ ದಿನ ಪ್ರತ್ಯೇಕ ಕೊಠಿಡಿ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಕೌಶಲ್ಯಾಭಿವೃದ್ಧಿ ಅಧಿಕಾರಿ ಪುಷ್ಪಲತಾ ಎಂ.ಸಿ, ಮುಖಂಡರಾದ ಗಂಗಾಧರ್, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್,ಇಒ ಸಂದೀಪ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.