ಸಾರಾಂಶ
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಅವಕಾಶ ಬಳಸಿಕೊಂಡು ರೈತರು ಸ್ವಾವಲಂಬನೆ ಸಾಧಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಚನ್ನಗಿರಿಯಲ್ಲಿ ಹೇಳಿದ್ದಾರೆ.
- ಸ್ವಸಹಾಯ ಸಂಘಗಳಿಗೆ ಸಾಲ ಪತ್ರ ವಿತರಿಸಿ ತಾಪಂ ಇಒ ಉತ್ತಮ ಸಲಹೆ- - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಅವಕಾಶ ಬಳಸಿಕೊಂಡು ರೈತರು ಸ್ವಾವಲಂಬನೆ ಸಾಧಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಹೇಳಿದರು.ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಚನ್ನಗಿರಿ ತಾಲೂಕು ಪಂಚಾಯಿತಿ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಹಮ್ಮಿಕೊಂಡಿದ್ದ ಸಾಲ ಮೇಳ ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣೆ ಮಾತನಾಡಿದರು.
ಸ್ವಸಹಾಯ ಸಂಘಗಳ ಸದಸ್ಯರು ಸಾಲ ಸೌಲಭ್ಯಕ್ಕಾಗಿ ನೇರವಾಗಿ ಬ್ಯಾಂಕಿಗೆ ಹೋದಾಗ ಅಲ್ಲಿನ ಸಿಬ್ಬಂದಿ ಇಲ್ಲಸಲ್ಲದ ದಾಖಲೆಗಳನ್ನು, ಕಾರಣಗಳನ್ನು ಕೇಳಿ-ಹೇಳಿ ಸೌಲಭ್ಯಗಳನ್ನು ನೀಡುತ್ತಿರಲಿಲ್ಲ. ಈ ಬಗ್ಗೆ ಸ್ವಸಹಾಯ ಸಂಘಗಳ ಸದಸ್ಯರು ದೂರು ಹೇಳಿಕೊಂಡರು. ಆಗ ತಾಲೂಕಿನಲ್ಲಿರುವ ಎಲ್ಲ ರಾಷ್ಟ್ರೀಕೃತ ಬ್ಯಾಂಕಿನ ವ್ಯವಸ್ಥಾಪಕರನ್ನು ಕರೆಸಿ, ಸ್ವಸಹಾಯ ಸಂಘಗಳ ಸದಸ್ಯರ ಸಮ್ಮುಖದಲ್ಲಿಯೇ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಸ್ಥಳದಲ್ಲಿಯೇ ಸಾಲ ಸೌಲಭ್ಯದ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಸಾಲ ಸೌಲಭ್ಯಕ್ಕೆ ಬೇಕಾದ ದಾಖಲೆಗಳ ಬಗ್ಗೆ ತಿಳಿದುಕೊಳ್ಳಲು ನಮ್ಮ ಕಚೇರಿಯಲ್ಲಿಯೇ ಹೆಲ್ಪ್‌ಲೈನ್ ಸಹ ತೆರೆಯಲಾಗಿದ್ದು, ಸದುಪಯೋಗ ಪಡೆಯುವಂತೆ ತಿಳಿಸಿದರು.ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಕಚೇರಿಯ ಆವರಣದಲ್ಲಿಯೇ ಮಹಿಳಾ ಕ್ಯಾಂಟಿನ್ ತೆರೆಯಲು ಉದ್ದೇಶಿಸಲಾಗಿದೆ. ಈ ದಿನ ನಡೆಯುತ್ತೀರುವ ಸಾಲ ಮೇಳ ದಾವಣಗೆರೆ ಜಿಲ್ಲೆಯಲ್ಲೇ ನಮ್ಮ ತಾಲೂಕಿನಲ್ಲಿ ಪ್ರಥಮವಾಗಿದೆ ಎಂದರು.
ಈ ಸಂದರ್ಭ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಭರತ್ ಸೇರಿದಂತೆ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಕಚೇರಿ ಸಿಬ್ಬಂದಿ ಹಾಜರಿದ್ದರು.- - - -26ಕೆಸಿಎನ್‌ಜಿ1:
ತಾಪಂ ಇಒ ಬಿ.ಕೆ.ಉತ್ತಮ ಅವರು ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರಾತಿ ಪತ್ರವನ್ನು ವಿತರಿಸಿದರು.