ಆಶ್ರಯ ಕೇಂದ್ರದ ಸದುಪಯೋಗ ಪಡೆಯಿರಿ: ಉಮೇಶ ಚವ್ಹಾಣ

| Published : Dec 05 2024, 12:33 AM IST

ಸಾರಾಂಶ

Take advantage of the shelter center: Umesh Chavan

ಯಾದಗಿರಿ: ಜಿಲ್ಲೆ, ತಾಲೂಕು, ಬೇರೆ ಜಿಲ್ಲೆಗಳಿಂದ ವಲಸೆ ಬಂದ ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಅನುಕೂಲವಾಗಲು ಸ್ಥಾಪಿಸಲಾದ ವಸತಿರಹಿತರ ಆಶ್ರಯ ಕೇಂದ್ರದ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ನಗರಸಭೆಯ ಪೌರಾಯುಕ್ತ ಉಮೇಶ ಚವ್ಹಾಣ ಮನವಿ ಮಾಡಿದರು.ನಿರಾಶ್ರಿತ ವರ್ಗದ ಕಾರ್ಮಿಕರ ಅನುಕೂಲಕ್ಕಾಗಿ ಡೇ-ಎನ್ ಯು.ಎಲ್.ಎಂ ಅಭಿಯಾನದ ಅಡಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ನಗರಸಭೆಯಿಂದ ನಗರ ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಬಡ ಜನರು ನಗರದ ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಫುಟ್‌ಪಾತ್ ಮೇಲೆ ರಾತ್ರಿ ಕಳೆಯುತ್ತಾರೆ. ಇಂಥವರಿಗೆ ಒಂದಿಷ್ಟು ದಿನ ನೆಲೆ ಒದಗಿಸಲಿದೆ ನಗರ ವಸತಿ ರಹಿತರ ಆಶ್ರಯ ಕೇಂದ್ರ ಆರಂಭಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ಕೆ. ವೈದ್ಯ ಹಾಗೂ ಸಿಬ್ಬಂದಿ ವರ್ಗ ಮತ್ತು ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಇದ್ದರು.

----

5ವೈಡಿಆರ್3: ಯಾದಗಿರಿ ನಗರದ ನಗರ ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ನಗರಸಭೆಯ ಪೌರಾಯುಕ್ತ ಉಮೇಶ ಚವ್ಹಾಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.