ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾದಂತೆ ನೋಡಿಕೊಳ್ಳಿ: ವಿಶ್ವನಾಥ ಮುರುಡಿ

| Published : Mar 27 2024, 01:04 AM IST

ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾದಂತೆ ನೋಡಿಕೊಳ್ಳಿ: ವಿಶ್ವನಾಥ ಮುರುಡಿ
Share this Article
  • FB
  • TW
  • Linkdin
  • Email

ಸಾರಾಂಶ

ಏ.31 ಹಾಗೂ 1ರಂದು ನಡೆಯಲಿರುವ ಶ್ರೀ ಕನಕಾಚಲಪತಿ ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.

ಕನಕಾಚಲಪತಿ ಜಾತ್ರಾ ನಿಮಿತ್ತ ಅಧಿಕಾರಿಗಳ ಸಭೆಯಲ್ಲಿ ತಹಸೀಲ್ದಾರ ಸೂಚನೆಕನ್ನಡಪ್ರಭ ವಾರ್ತೆ ಕನಕಗಿರಿ

ಏ.31 ಹಾಗೂ 1ರಂದು ನಡೆಯಲಿರುವ ಶ್ರೀ ಕನಕಾಚಲಪತಿ ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಹಸೀಲ್ದಾರ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿಶ್ವನಾಥ ಮುರುಡಿ ಸೂಚಿಸಿದರು.

ಸೋಮವಾರ ತಹಸೀಲ್ದಾರ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಾತ್ರಾ ಪೂರ್ವಭಾವಿ ಸಭೆಯ ನೇತೃತ್ವವಹಿಸಿ ಮಾತನಾಡಿದರು. ಕನಕಚಲಪತಿ ಜಾತ್ರೆಗೆ ರಾಜ್ಯವಲ್ಲದೆ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ. ರಾಜಬೀದಿ, ಎಪಿಎಂಸಿ ಆವರಣ, ವಾಲ್ಮೀಕಿ ವೃತ್ತ, ಅಂಬೇಡ್ಕರ್‌ ವೃತ್ತ, ಕಲ್ಮಠದ, ಚಿದಾನಂದ ಅವಧೂತರ ಮಠದ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಾ.30 ರಿಂದ ಏ.1ರ ರಾತ್ರಿ ಸಮಯದವರೆಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಲು ಕ್ರಮವಹಿಸಬೇಕೆಂದು ಪಪಂ, ತಾಪಂ ಗ್ರಾಪಂ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಕೇಶ ಮಂಡನೆ ಮಾಡಿಸಿಕೊಳ್ಳುವ ಭಕ್ತರಿಗೆ ಸ್ನಾನ ಮಾಡಲು ಹಾಗೂ ಕುಡಿಯಲು ನೀರನ್ನು ಪ್ರತ್ಯೇಕ ವ್ಯವಸ್ಥೆ ಮಾಡುವುದು, ತುರ್ತು ಚಿಕಿತ್ಸಾ ಕೇಂದ್ರ ತೆರೆಯುವುದು, ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸುವುದು, ರಕ್ತದಾನ ಶಿಬಿರ ಆಯೋಜಿಸುವುದು, ಸ್ವಚ್ಛತೆ ಕಾಪಾಡುವುದು, ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುವುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕಾಳಜಿ ವಹಿಸಿ ಕೆಲಸ ನಿರ್ವಹಿಸಬೇಕೆಂದರು.

ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಯ್ಯ, ಉಪ ತಹಸೀಲ್ದಾರ ವಿ.ಎಚ್. ಹೊರಪೇಟೆ, ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಜೆಸ್ಕಾಂ ಶಾಖಾಧಿಕಾರಿ ಆನಂದ, ಗಂಗಾವತಿ ಕೆಎಸ್ಸಾಆರ್ಟಿಸಿ ಡಿಪೋ ವ್ಯವಸ್ಥಾಪಕ ಪರಶುರಾಮ, ಸಂಚಾರಿ ನಿಯಂತ್ರಕ ಶ್ರೀರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.