ಸಾರಾಂಶ
ಬಾಳೆಹೊನ್ನೂರಿನ ರೋಟರಿ ಕ್ಲಬ್, ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಉದ್ಘಾಟಿಸಿದರು
ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.ಪಟ್ಟಣದ ರೋಟರಿ ಸಮುದಾಯ ಭವನದಲ್ಲಿ ರೋಟರಿ ಕ್ಲಬ್ ಹಾಗೂ ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ.
ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯವೇ ಭಾಗ್ಯವಾಗಿದ್ದು, ಆರೋಗ್ಯವಿದ್ದರೆ ಜೀವನದಲ್ಲಿ ಎಲ್ಲವೂ ಸಾಧ್ಯವಿದೆ. ಸಮತೋಲಿತ ಆರೋಗ್ಯ ಕಾಪಾಡಿಕೊಂಡರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹ ವರ್ಷಕ್ಕೆ ಒಂದೆರಡು ಬಾರಿಯಾದರೂ ಸಂಪೂರ್ಣ ಆರೋಗ್ಯ ಪರೀಕ್ಷೆಗೆ ಒಳಪಡಬೇಕು. ಆಗ ಯಾವುದೇ ಸಮಸ್ಯೆಗಳಿದ್ದರೆ ತಿಳಿದುಕೊಳ್ಳಬಹುದು ಎಂದರು.ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ ಮಾತನಾಡಿ, ರೋಟರಿ ಸಂಸ್ಥೆಯು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದು, ಸಾರ್ವಜನಿಕರಿಗೆ ಒಂದೇ ವೇದಿಕೆಯಡಿ ಎಲ್ಲಾ ರೀತಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇದರೊಂದಿಗೆ ವಿವಿಧ ಕಾಯಿಲೆಗಳಿಗೆ ಉಚಿತ ಔಷಧಿ ಸಹ ಮಾಡಲಾಗುತ್ತಿದೆ ಎಂದರು.
ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ದೇಶಕ ಡಾ.ಯತೀಶ್ ಕುಮಾರ್, ದಿನೇಶ್, ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ.ಸೌಮ್ಯ, ರೋಟರಿ ಕಾರ್ಯದರ್ಶಿ ಯಶವಂತ, ಸದಸ್ಯರಾದ ಕೆ.ಕೆ.ವೆಂಕಟೇಶ್, ಎಚ್.ಗೋಪಾಲ್ ಇದ್ದರು.