ಒತ್ತಡದ ಬದುಕಿನ ನಡುವೆಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

| Published : Oct 26 2024, 01:06 AM IST

ಒತ್ತಡದ ಬದುಕಿನ ನಡುವೆಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಹಿರಿಯೂರು : ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಸದುಪಯೋಗ ಮಾಡಿಕೊಂಡು ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಹಿರಿಯೂರು : ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಸದುಪಯೋಗ ಮಾಡಿಕೊಂಡು ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಪಟ್ಟಣದ ವೇದಾವತಿ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನವಿ ಟ್ರಸ್ಟ್ ಹಾಗೂ ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಮನವಿ ಟ್ರಸ್ಟ್ ನ ಸಂಸ್ಥಾಪಕಿ ಮಾನಸ ಮಂಜುನಾಥ್ ಗೌಡರವರು ಅತ್ಯಂತ ಸಾಮಾಜಿಕ ಕಾಳಜಿ ಹೊಂದಿದವರಾಗಿದ್ದು ಬೆಂಗಳೂರು ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣ ಶಿಬಿರ ಏರ್ಪಡಿಸಿರುವುದು ಸಂತೋಷದ ವಿಷಯ. ಇಂತಹ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿದರೆ ಬಡವರ ಆರೋಗ್ಯ ಚಿಕಿತ್ಸೆಗೆ ಅನುಕೂಲವಾಗಲಿದೆ. ಒತ್ತಡದ ಈ ಆಧುನಿಕ ಬದುಕಿನಲ್ಲಿ ಮನುಷ್ಯನಿಗೆ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು ಜನರು ತಮ್ಮ ದೈನಂದಿನ ಕೆಲಸದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು.ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಲ ಕಾಲಕ್ಕೆ ಎಲ್ಲರೂ ಪರೀಕ್ಷಿಸಿಕೊಳ್ಳಬೇಕು ಎಂದರು.

ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ ನಗರದ ಮನವಿ ಟ್ರಸ್ಟ್ ಸಂಸ್ಥೆಯ ವತಿಯಿಂದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದ್ದು ಅವರಿಗೆ ಸಮಾಜದ ಬಡಜನರು, ಹಿಂದುಳಿದವರ ಬಗ್ಗೆ ಇರುವ ಸಾಮಾಜಿಕ ಕಳಕಳಿ ನಿಜಕ್ಕೂ ಮೆಚ್ಚುವಂತಹದ್ದು ಎಂದರು.

ಮನವಿ ಟ್ರಸ್ಟ್ ನ ಸಂಸ್ಥಾಪಕಿ ಮಾನಸ ಮಂಜುನಾಥ್ ಗೌಡ ಮಾತನಾಡಿ ನಾನು ವೇದಾವತಿ ನಗರದ ನಿವಾಸಿಯಾಗಿದ್ದು ಈ ಬಡಾವಣೆಯಲ್ಲಿ ಬಹಳ ಜನ ಬಡವರು, ಕೂಲಿಕಾರ್ಮಿಕರು ವಾಸವಾಗಿದ್ದಾರೆ. ಅವರೆಲ್ಲಾ ಆರೋಗ್ಯ ತಪಾಸಣೆಗಾಗಿ ದೂರದ ಊರುಗಳಿಗೆ ಹೋಗುವುದು ಕಷ್ಟಸಾಧ್ಯವಾಗಿದ್ದು ಅವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆಯ ಮೂಲಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮುಖಂಡರುಗಳಾದ ಜಿ.ಎಲ್.ಮೂರ್ತಿ, ಬೈರೇಶ್ ಪಟೇಲ್, ಸಮಾಜಸೇವಕಿ ಶಶಿಕಲಾ ರವಿಶಂಕರ್, ನಗರಸಭೆ ಉಪಾಧ್ಯಕ್ಷೆ ಅಂಬಿಕಾಆರಾಧ್ಯ, ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜಿನಿ, ಸುರೇಖಾಮಣಿ, ಸರ್ವಮಂಗಳ, ರಮ್ಯಾರಾಜು, ಇಂದ್ರಮ್ಮ, ಕಲ್ಪನಾ, ಸುನೀತಾ, ಶಕುಂತಲಾ, ಮಮತಾಗೌಡ,ರೈತ ಮುಖಂಡ ಕೆಸಿ.ಹೋರಕೇರಪ್ಪ, ಕರವೇ ಗೌರವಾಧ್ಯಕ್ಷ ಗೋ.ಬಸವರಾಜ್, ಕರವೇ ಅಧ್ಯಕ್ಷ ರಾಮಕೃಷ್ಣಪ್ಪ ಮುಂತಾದವರು ಹಾಜರಿದ್ದರು.

ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಸುಮಾರು 450 ಕ್ಕೂ ಹೆಚ್ಚು ಜನರು ಪಡೆದರು.