ನಾಡು ನುಡಿಯ ಬಗ್ಗೆ ಕಾಳಜಿ ವಹಿಸಿ: ಎಸೈ ಪ್ರವೀಣ್ ಕುಮಾರ್

| Published : Nov 04 2025, 01:02 AM IST

ಸಾರಾಂಶ

ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ೨೮ನೇ ವರ್ಷ ಸದ್ಭಾವನಾ- ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದೇ, ವಿಶೇಷ ಕಾಳಜಿ ವಹಿಸಿ, ಅದನ್ನು ಉಳಿಸಿ ಬೆಳೆಸಬೇಕು ಎಂದು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಕರೆ ನೀಡಿದರು.ಅವರು ಇಲ್ಲಿನ ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ೨೮ನೇ ವರ್ಷ ಸದ್ಭಾವನಾ- ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಕನ್ನಡ ಧ್ವಜವನ್ನು ಅರಳಿಸಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿ, ಬೇರೆ ಭಾಷೆಗಳನ್ನು ಗೌರವಿಸುವುದರ ಜೊತೆಗೆ ಮಾತೃ ಭಾಷೆಗೆ ವಿಶೇಷ ಆಸಕ್ತಿ ತೋರಬೇಕು. ನಮ್ಮ ಭಾಷೆ ಮನೆ ಮನಗಳಲ್ಲಿ ನಿತ್ಯ ನಿರಂತರವಾಗಿಸಬೇಕು ಎಂದವರು ಸಲಹೆ ನೀಡಿದರು.ಕಾರ್ಯಕ್ರಮವನ್ನು ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಎಚ್. ಕುಂದರ್ ಉದ್ಘಾಟಿಸಿದರು. ಇದೇ ವೇಳೆ ಸಾಮಾಜಿಕ ಸೇವೆಗೈಯ್ಯುತ್ತಿರುವ ಕೋಟದ ಹರ್ತಟ್ಟು ಮಂಜುನಾಥ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ ಕೋಟ, ಪರಿಸರವಾದಿ ಕೋ.ಗಿ.ನಾ., ಯುವಕಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸನ್ಮಾನ ಪತ್ರವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು ವಾಚಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತಾ ಬಾಯರಿ ನಿರೂಪಿಸಿದರು.

ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ಯ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಸ್ತಾವನೆ ಸಲ್ಲಿಸಿ ಕಾರ್ಯಕ್ರಮ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೭೦ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ೨೮ನೇ ವರ್ಷ ಸದ್ಭಾವನಾ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಸಾಮಾಜಿಕ ಸೇವೆಗೈಯುತ್ತಿರುವ ಕೋಟದ ಹರ್ತಟ್ಟು ಮಂಜುನಾಥ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಎಚ್.ಕುಂದರ್, ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್, ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಎಚ್. ಕುಂದರ್, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಇದ್ದರು.