ಕಿಮ್ಸ್‌ ಉಸ್ತುವಾರಿ ವಹಿಸಿಕೊಳ್ಳುವಂತೆ ಡಾ। ಮಂಜುನಾಥ್‌ಗೆ ಒತ್ತಾಯ

| Published : Feb 04 2024, 01:30 AM IST

ಕಿಮ್ಸ್‌ ಉಸ್ತುವಾರಿ ವಹಿಸಿಕೊಳ್ಳುವಂತೆ ಡಾ। ಮಂಜುನಾಥ್‌ಗೆ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಕಿಮ್ಸ್‌ ಅಧಿಕಾರ ವಹಿಸಿಕೊಳ್ಳುವಂತೆ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ವಹಿಸಿಕೊಳ್ಳುವಂತೆ ಒಕ್ಕಲಿಗ ಸಂಘವು ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ಅವರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ ನಡೆಸಿದ್ದು, ಕೆಂಪೇಗೌಡ ವೈದ್ಯಕೀಯ ಕಾಲೇಜು (ಕಿಮ್ಸ್‌) ಮತ್ತು ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳುವಂತೆ ಸಂಘವು ಮನವಿ ಮಾಡಿದೆ.ಶನಿವಾರ ಸಂಘದ ಆವರಣದಲ್ಲಿರುವ ಕುವೆಂಪು ಕಲಾ ಕ್ಷೇತ್ರದಲ್ಲಿ ಡಾ. ಸಿ.ಎನ್. ಮಂಜುನಾಥ್ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಹೂಮಳೆ ಸುರಿಸಿ ಗೌರವಯುತವಾಗಿ ಸನ್ಮಾನಿಸಲಾಯಿತು.ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ, ಇನ್ನು ಮುಂದೆಕೆಂಪೇಗೌಡ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿ ಅಥವಾ ಮೇಲುಸ್ತುವಾರಿಯ್ನು ತಮಗೆ ವಹಿಸಲು ಜ.31 ರಂದು ನಡೆದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದಿಸಿ ಜವಾಬ್ದಾರಿ ಸ್ವೀಕರಿಸಿ ಎಂದು ಮನವಿ ಪತ್ರ ಸಲ್ಲಿಕೆ ಮಾಡಿದರು.ಕೆಂಪೇಗೌಡ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಭಗವಾನ್ ಸೇರಿದಂತೆ ಹಲವರು ಹಾಜರಿದ್ದರು.ಸಲಹೆ ನೀಡುತ್ತೇನೆ: ಮಂಜುನಾಥ್

ಸಂಘದ ಮನವಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದ ವೈದ್ಯಕೀಯ ಸಂಸ್ಥೆಗಳ ಬೆಳವಣಿಗೆಗೆ ಅಗತ್ಯವಾದ ಸಲಹೆ ಸಹಕಾರ ನೀಡುತ್ತೇನೆ. ಸಲಹೆಗೂ ಸಂಸ್ಥೆಗಳನ್ನು ಬೆಳೆಸುವ ದೊಡ್ಡ ಶಕ್ತಿ ಇದೆ. ಒಕ್ಕಲಿಗರ ಸಂಘವು ಉತ್ತಮ ಕೆಲಸ ಮಾಡುತ್ತಿದೆ. ಸಂಘ ಮತ್ತು ಸಂಸ್ಥೆಗಳು ನಮ್ಮದು ಎಂಬ ಮನೋಭಾವನೆಯಿಂದ ಎಲ್ಲರೂ ಕೆಲಸ ಮಾಡಿದರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿದೆ ಎಂದಷ್ಟೇ ಹೇಳಿದರು.