ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ ಉಡುಪಿಯ ಪ್ರಮುಖ ಬೇಡಿಕೆಗಳಾದ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾಚರಿಸಲು ಅಗತ್ಯ ಸಿಬ್ಬಂದಿ ಮಂಜೂರಾತಿ ನೀಡಲು ನಿರ್ಣಯ ಕೈಗೊಂಡು, ಶೀಘ್ರವಾಗಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಒದಗಿಸಲು ಕ್ರಮ ವಹಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಉಡುಪಿ : ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ ಉಡುಪಿಯ ಪ್ರಮುಖ ಬೇಡಿಕೆಗಳಾದ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾಚರಿಸಲು ಅಗತ್ಯ ಸಿಬ್ಬಂದಿ ಮಂಜೂರಾತಿ ನೀಡಲು ನಿರ್ಣಯ ಕೈಗೊಂಡು, ಶೀಘ್ರವಾಗಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಒದಗಿಸಲು ಕ್ರಮ ವಹಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಉಡುಪಿಯ ಪ್ರಮುಖ ಬೇಡಿಕೆಗಳಾದ ಕೃಷಿ ಪದವಿ ಕಾಲೇಜು ಸ್ಥಾಪನೆ, ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಪ್ರೋತ್ಸಾಹ, ಕರಾವಳಿಯ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಪ್ರಾಕೃತಿಕ ವಿಕೋಪಕ್ಕೆ ಅನುದಾನ, ಜಿಲ್ಲೆಯ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ, ಬರ ಪರಿಹಾರಕ್ಕೆ ಅನುದಾನ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ, ಮಳೆಯಿಂದ ಹಾನಿಗೊಳಗಾದ ವಾಸದ ಮನೆಗಳ ಪರಿಹಾರ ಮಂಜೂರಾತಿ ನೀಡುವಂತೆ ಮಾಡಿದ್ದಾರೆ.ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಗಳು ಕ್ಲಪ್ತ ಸಮಯದಲ್ಲಿ ಸಿಗುವಂತಾಗಲು ಅಗತ್ಯ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮ, ಶಾಲಾ ಕಾಲೇಜು ಮಕ್ಕಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಸೌಲಭ್ಯ, ವಿವಿಧ ನಿಗಮ ಮಂಡಳಿಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಹಾ ಯೋಜನೆ ಅಂತಿಮಗೊಳಿಸುವುದು ಹಾಗೂ ಶ್ರೀ ಕೃಷ್ಣ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.