ಸಾರಾಂಶ
ಈ ಮಾತ್ರೆ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿನ ಜಂತು ಹುಳುಗಳು ನಿವಾರಣೆಯಾಗುತ್ತವೆ. ಕಾರ್ಯಕ್ರಮ ವರ್ಷಕ್ಕೆ ಎರಡು ಬಾರಿ ಮಾಡಲಾಗುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ ಹೇಳಿದರು.
ಕನ್ನಡಪ್ರಭ ವಾರ್ತೆ ಕುಷ್ಟಗಿ
ರಕ್ತಹೀನತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ ಹೇಳಿದರು.ತಾಲೂಕಿನ ನವಲಳ್ಳಿ ಹಾಗೂ ಹಂಚಿನಾಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಮನ್ನಾಪುರದ ವತಿಯಿಂದ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದಲ್ಲಿ ಮಾತ್ರೆ ವಿತರಿಸಿ ಮಾತನಾಡಿದರು.
ಈ ಮಾತ್ರೆ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿನ ಜಂತು ಹುಳುಗಳು ನಿವಾರಣೆಯಾಗುತ್ತವೆ. ಕಾರ್ಯಕ್ರಮ ವರ್ಷಕ್ಕೆ ಎರಡು ಬಾರಿ ಮಾಡಲಾಗುತ್ತದೆ. ಇದರ ಉದ್ದೇಶ ಮಕ್ಕಳು ರಕ್ತಹೀನತೆಯಿಂದ ಬಳಲಬಾರದು ಎನ್ನುವುದಾಗಿದೆ ಎಂದರು.ಮೇ 13ರಿಂದ 27ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಆಶಾ ಕಾರ್ಯಕರ್ತರು ಮನೆಮನೆಗೆ ಹೋಗಿ ಭೇಟಿ ನೀಡಿ ಮಾತ್ರೆಗಳನ್ನು ವಿತರಿಸುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಮಂಜುನಾಥ ಗುಡದೂರ, ಆಶಾ ಕಾರ್ಯಕರ್ತೆಯರಾದ ಮಹಾದೇವಮ್ಮ, ಗುರಮ್ಮ, ಪಾರ್ವತಿ ಹಂಚಿನಾಳ ಹಾಗೂ ಅಂಗನವಾಡಿ ಕಾರ್ಯಕರ್ತೆ ಈರಮ್ಮ ಸೇರಿದಂತೆ ಅನೇಕ ಮಕ್ಕಳು ಭಾಗವಹಿಸಿದ್ದರು.ತಾವರಗೇರಾ:
ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಆಚರಣೆ ಆಚರಿಸಲಾಯಿತು. ಮಕ್ಕಳಿಗೆ ಮಾತ್ರೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಆಪ್ತ ಸಮಾಲೋಚಕ ಅರುಣ ಕುಮಾರ ಹಿರೇಮಠ, ಸಮುದಾಯ ಆರೋಗ್ಯ ಅಧಿಕಾರಿ ಸ್ಮೀತಾ, ಆಶಾ ಕಾರ್ಯಕರ್ತೆಯರು ಇದ್ದರು.