ಪ್ರಾಕೃತಿಕ ವಿಕೋಪ ಹಾನಿ ಕಾಮಗಾರಿಗಳ ಬಗ್ಗೆ ತಕ್ಷಣ ಕ್ರಮ ವಹಿಸಿ: ಯಶ್ಪಾಲ್ ಸುವರ್ಣ

| Published : Jul 30 2024, 12:38 AM IST

ಪ್ರಾಕೃತಿಕ ವಿಕೋಪ ಹಾನಿ ಕಾಮಗಾರಿಗಳ ಬಗ್ಗೆ ತಕ್ಷಣ ಕ್ರಮ ವಹಿಸಿ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ನಗರಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಸಾರ್ವಜನಿಕ ಆಸ್ತಿ ಪಾಸ್ತಿಯ ಸುಮಾರು 25 ಕೋಟಿ ರು. ನಷ್ಟದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇತ್ತೀಚೆಗೆ ಸುರಿದ ಭಾರಿ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಹಲವೆಡೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ರಸ್ತೆಗಳಲ್ಲಿ ಗುಂಡಿ, ಅಸಮರ್ಪಕ ಚರಂಡಿ ವ್ಯವಸ್ಥೆ ಸಹಿತ ವಿವಿಧ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕಾಮಗಾರಿಗಳನ್ನು ನಡೆಸುವಂತೆ ನಗರಸಭೆ ಅಧಿಕಾರಿಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.ಉಡುಪಿ ನಗರಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಸಾರ್ವಜನಿಕ ಆಸ್ತಿ ಪಾಸ್ತಿಯ ಸುಮಾರು 25 ಕೋಟಿ ರು. ನಷ್ಟದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ತಿಳಿಸಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಉಡುಪಿ ಮತ್ತು ಬ್ರಹ್ಮಾವರ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 55 ಮನೆಗಳು ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿದ್ದು, ಕಂದಾಯ ಇಲಾಖೆಯಿಂದ ಪರಿಹಾರ ಧನವಾಗಿ ಕೇವಲ 10 ಲಕ್ಷ ರು. ಮಾತ್ರ ಮಂಜೂರುಗೊಂಡಿದೆ. ಸರ್ಕಾರ ಕೂಡಲೇ ಪೂರ್ಣ ಹಾನಿಗೀಡಾದ ಮನೆಗಳಿಗೆ 5 ಲಕ್ಷ, ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷವನ್ನು ಈ ಹಿಂದಿನಂತೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವುದಾಗಿ ಹೇಳಿದರು.

ಪ್ರತಿ ಬುಧವಾರ ನಗರಸಭೆಯಲ್ಲಿ ಹಿರಿಯ ನಾಗರಿಕರ ಭೇಟಿ ಸಮಯ ಮೀಸಲು, ಹಳೆಯ ವಿಶ್ವೇಶ್ವರ ಮಾರುಕಟ್ಟೆ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ, ಪಾರ್ಕಿಂಗ್ ಸೌಲಭ್ಯದೊಂದಿಗೆ ವ್ಯವಸ್ಥಿತ ನೂತನ ಬಸ್ ನಿಲ್ದಾಣದ ನೀಲ ನಕಾಶೆ ತಯಾರಿಸಲು ಹಾಗೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕಾಮಗಾರಿಗಳ ತಕ್ಷಣ ಆರಂಭ, ಸಮರ್ಪಕ ದಾರಿ ದೀಪ ನಿರ್ವಹಣೆಯ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಪೌರಾಯುಕ್ತ ರಾಯಪ್ಪ, ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.