ಬೀದಿನಾಯಿಗಳ ಹಾವಳಿ ತಡೆಗೆ ತಕ್ಷಣ ಕ್ರಮ ಕೈಗೊಳ್ಳಿ

| Published : Nov 25 2025, 01:30 AM IST

ಬೀದಿನಾಯಿಗಳ ಹಾವಳಿ ತಡೆಗೆ ತಕ್ಷಣ ಕ್ರಮ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ ಹೆಚ್ಚಾಗಿದೆ. ಕೋರ್ಟ್ ಕೂಡ ಸ್ಪಷ್ಟ ಆದೇಶ ನೀಡಿರುವುದರಿಂದ ವಿಳಂಬವಿಲ್ಲದೆ ನಾಯಿಗಳನ್ನು ಸೆರೆ ಹಿಡಿದು ಶೆಡ್‌ಗಳಲ್ಲಿ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು. ಮಹಾನಗರ ಪಾಲಿಕೆಯು ಹಿಡಿದ ನಾಯಿಗಳನ್ನು ಗೈಡ್ಲೈನ್ ಪ್ರಕಾರ ಇರಿಸುವ ಶೆಡ್‌ಗಳನ್ನು ಶೀಘ್ರ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು. ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳು ರಾಜ್ಯ?ಕೇಂದ್ರ ಸರ್ಕಾರದ ಯೋಜನೆಗಳನ್ನು ಪಾವತಿದಾರರಿಗೆ ಸರಿಯಾಗಿ ತಲುಪಿಸುವಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಕೋರ್ಟ್ ಆದೇಶದಂತೆ ತಾಲೂಕಿನಾದ್ಯಂತ ಬೀದಿನಾಯಿಗಳ ಸೆರೆ ಹಾಗೂ ಸ್ಥಳಾಂತರ ಕಾರ್ಯವನ್ನು ತಕ್ಷಣ ಪ್ರಾರಂಭಿಸುವಂತೆ ಶಾಸಕ ಸ್ವರೂಪ್ ಪ್ರಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ ಹೆಚ್ಚಾಗಿದೆ. ಕೋರ್ಟ್ ಕೂಡ ಸ್ಪಷ್ಟ ಆದೇಶ ನೀಡಿರುವುದರಿಂದ ವಿಳಂಬವಿಲ್ಲದೆ ನಾಯಿಗಳನ್ನು ಸೆರೆ ಹಿಡಿದು ಶೆಡ್‌ಗಳಲ್ಲಿ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು. ಮಹಾನಗರ ಪಾಲಿಕೆಯು ಹಿಡಿದ ನಾಯಿಗಳನ್ನು ಗೈಡ್ಲೈನ್ ಪ್ರಕಾರ ಇರಿಸುವ ಶೆಡ್‌ಗಳನ್ನು ಶೀಘ್ರ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು. ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳು ರಾಜ್ಯ?ಕೇಂದ್ರ ಸರ್ಕಾರದ ಯೋಜನೆಗಳನ್ನು ಪಾವತಿದಾರರಿಗೆ ಸರಿಯಾಗಿ ತಲುಪಿಸುವಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಬೇಸಿಗೆ ಇನ್ನೇನು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಆದ್ಯತೆ ನೀಡುವಂತೆ ಕಂದಾಯ, ಚೆಸ್ಕಾಂ, ಮುಜರಾಯಿ, ಕೃಷಿ, ತೋಟಗಾರಿಕೆ ಇಲಾಖೆಗೆ ಸೂಚಿಸಿದರು.ಗ್ರಾಮೀಣ ಪ್ರದೇಶಗಳ ಕೊಳಚರಂಡಿಗಳು ಹೂಳು ಮತ್ತು ಕಸದಿನಿಂದ ತುಂಬಿ ಹರಿವಿನಲ್ಲಿ ಅಡ್ಡಿ ಉಂಟಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ವಚ್ಛಗೊಳಿಸಬೇಕು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದರು. ಸ್ವಚ್ಛತೆಗೆ ಸಂಬಂಧಿಸಿದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರ್ವಹಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಇದರಿಂದ ಗ್ರಾಮೀಣ ಜನತೆಗೆ ಉದ್ಯೋಗ ಸಿಗುವುದಷ್ಟೇ ಅಲ್ಲ, ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುತ್ತದೆ ಎಂದು ಅವರು ತಿಳಿಸಿದರು. ಯಾವುದೇ ಸರ್ಕಾರದ ಯೋಜನೆ ವಿಫಲವಾಗಬಾರದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಹಾಸನ ತಾಲ್ಲೂಕಿನ ಒಟ್ಟು ೧೭೮ ಅಂಗನವಾಡಿಗಳನ್ನು ‘ಸಕ್ಷಮ ಅಂಗನವಾಡಿಗಳಾಗಿ’ ಗುರುತಿಸಲಾಗಿದ್ದು, ಅವುಗಳಲ್ಲಿ ೧೦ ಅಂಗನವಾಡಿಗಳು ಹಾಸನದಲ್ಲಿವೆ. ನವೆಂಬರ್ ೨೮ರಿಂದ ಆರಂಭವಾಗುವ ಹೊಸ ಕಾರ್ಯಕ್ರಮದ ಅಂಗವಾಗಿ ಈ ಅಂಗನವಾಡಿಗಳಿಗೆ ಟಿವಿಗಳನ್ನು ಶಾಸಕ ಸ್ವರೂಪ್ ಪ್ರಕಾಶ್ ವಿತರಿಸಿದರು. ಟಿವಿಗಳ ಮೂಲಕ ಶಾಲಾಪೂರ್ವ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ದೊರೆಯಲಿ ಎಂದು ಅವರು ಶುಭ ಹಾರೈಸಿದರು.ಸಭೆಯಲ್ಲಿ ತಹಸೀಲ್ದಾರ್ ಗೀತಾ, ತಾ.ಪಂ ಅಭಿವೃದ್ಧಿ ಅಧಿಕಾರಿ ಗಿರೀಶ್, ಸದಸ್ಯರಾದ ಮಲ್ಲೇಗೌಡ, ಕರೀಗೌಡ ಹಾಗೂ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.