ಗ್ರಾಮಗಳಲ್ಲಿನ ಪ್ರಸ್ತುತ ನೀರಿನ ಲಭ್ಯತೆ, ದಿನ ನಿತ್ಯದ ಬೇಡಿಕೆ ಹಾಗೂ ಸರಬರಾಜು ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು.
ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಜನ ಸಾಮಾನ್ಯರು, ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ತಿಳಿಸಿದರು.ಹೋಬಳಿಯ ಚೌಡೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕೃಷ್ಣಾಪುರ, ಬೋರಾಪುರ ಹಾಗೂ ರಾಮನಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಜೊತೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಎದುರಾಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಂದ ಮಾಹಿತಿ ಪಡೆದರು. ನೀರಿಗೆ ತತ್ವರ ಉಂಟಾಗಿರುವ ಗ್ರಾಮದಲ್ಲಿ ಕುಡಿವವ ನೀರು ಸರಬರಾಜಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕೂಡಲೇ ಕ್ರಮ ವಹಿಸಲು ನಿರ್ದೇಶನ ನೀಡಿದರು.ಗ್ರಾಮಗಳಲ್ಲಿನ ಪ್ರಸ್ತುತ ನೀರಿನ ಲಭ್ಯತೆ, ದಿನ ನಿತ್ಯದ ಬೇಡಿಕೆ ಹಾಗೂ ಸರಬರಾಜು ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಶಾಸಕ ಎಚ್.ಟಿ.ಮಂಜು ಮಾತನಾಡಿ, ತಾಲೂಕಿನ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಬಗ್ಗೆ ಈಗಾಗಲೇ ಹಲವಾರು ಸಭೆಗಳಲ್ಲಿ ಪಿಡಿಓಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿದೆ. ಗ್ರಾಮಸ್ಥರಿಗೆ ನಿರಂತರವಾಗಿ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಸಿಇಒ ಅವರಿಗೆ ಮಾಹಿತಿ ನೀಡಿದರು.
ಈ ವೇಳೆ ಜಿಪಂ ಯೋಜನಾ ನಿರ್ದೇಶಕ ಸುಂದರ್‌ರಾಜ್, ತಾಪಂ ಇಒ ಸುಷ್ಮಾ, ವಿವಿಧ ಗ್ರಾಪಂ.ಪಿಡಿಒ ಹಾಜರಿದ್ದರು.ಕೆರೆ ಕಟ್ಟೆಗಳಿಗೆ ನೀರು ತುಂಬಿಸುವಂತೆ ರೈತನಿಂದ ಏಕಾಂಗಿ ಪ್ರತಿಭಟನೆಕನ್ನಡಪ್ರಭ ವಾರ್ತೆ ಪಾಂಡವಪುರತಾಲೂಕಿನ ಕೆಂಚನಹಳ್ಳಿ ಹೂವಿನಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕೆರೆಕಟ್ಟೆಗಳಿಗೆ ಹೇಮಾವತಿ ನಾಲೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಗ್ರಾಮದ ರೈತ ಕೆ.ಎನ್.ನಾಗೇಗೌಡ ಪಟ್ಟಣದ ಹೇಮಾವತಿ ಇಲಾಖೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಹೇಮಾವತಿ ಕಚೇರಿ ಬಾಗಿಲಲ್ಲಿ ಕುಳಿತು ಧರಣಿ ನಡೆಸಿ ಹೇಮಾವತಿ ನಾಲೆಯಿಂದ ಎಲ್ಲಾ ಕೆರೆಕಟ್ಟೆಗಳ ತುಂಬಿಸುವಂತೆ ಆದೇಶವಿದ್ದರೂ ಸಹ ಅಧಿಕಾರಿಗಳ ಬೇಜಾಬ್ದಾರಿತನದಿಂದ ಕೆಂಚನಹಳ್ಳಿ ಹೂವಿನಕಟ್ಟೆ ಸೇರಿದಂತೆ ಸುತ್ತಮುತ್ತಕಲ ಗ್ರಾಮಗಳ ಕೆರೆಕಟ್ಟೆಗಳಿಗೆ ಇದುವರೆಗೂ ನೀರು ತುಂಬಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಳೆದ 15 ದಿನಗಳಿಂದಲೂ ಸಹ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಹ ಅಧಿಕಾರಿಗಳ ನೀರು ತುಂಬಿಸದೆ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ. ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಆ ಭಾಗದ ಅಂತರ್ಜಲ ಕುಸಿಯುತ್ತಿದೆ. ಹೆಚ್ಚಾಗಿ ಬೋರ್ ಬೆಲ್ ಗಳಿಂದ ಜಮೀನುಗಳಿಗೆ ನೀರು ಪೂರೈಕೆ ಹಿನ್ನೆಲೆಯಲ್ಲಿ ರೈತರು ಬೆಳೆಬೆಳೆಯಲು ಅನುಕೂಲವಾಗಲಿದೆ. ಹಾಗಾಗಿ ನೀರು ತುಂಬಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.ಬಳಿಕ ಸ್ಥಳಕ್ಕೆ ಬಂದ ಇಇ ಶ್ರೀನಾಥ್, ಎಇಇ ರಾಘವೇಂದ್ರ ರೈತನ ಮನವೊಲಿಸಿ ಸಂಜೆ ಅಥವಾ ನಾಳೆಯೊಳಗಾಗಿ ಕೆಂಚನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಭರವಸೆ ನೀಡಿದರು. ಜತೆಗೆ ಅಧಿಕಾರಿಗಳೊಂದಿಗೆ ಕೆರೆಕಟ್ಟೆಗಳ ವೀಕ್ಷಣೆಗೆ ಬರುವುದಾಗಿಯೂ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.