ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ

| Published : Jul 05 2024, 12:48 AM IST

ಸಾರಾಂಶ

ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ತಾಲೂಕು ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ತಾಲೂಕು ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಹೇಳಿದರು.

ಪಟ್ಟಣದ ಮಹೇಬೂಬ ನಗರದ ನಾಲತವಾಡ ರಸ್ತೆ ಪಕ್ಕದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದ ಎಸ್.ಡಿ.ಎಂ.ಸಿ ರಚನೆಯ ಪಾಲಕರ ಸಭೆಯಲ್ಲಿ ಅವರು ಮಾತನಾಡಿ, ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ, ಶುಚಿಗೊಳಿಸುವುದು ಅಗತ್ಯ. ಜತೆಗೆ, ಮನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಸೊಳ್ಳೆ ನಿವಾರಕ ಬಳಕೆಯೂ ಸೂಕ್ತವಾಗಿದೆ. ಆರೋಗ್ಯ ಇಲಾಖೆಯ ನಿರ್ದೇಶನದಂತೆ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆಯಿಂದ ನಗರ ಪಟ್ಟಣ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ಲಾರ್ವ ಸಮೀಕ್ಷೆ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಮಾಡುವ ಕಾರ್ಯ ನಡಿತಾ ಇದೆ. ಆರಂಭಿಕ ಹಂತದಲ್ಲೇ ಡೆಂಘೀ ಜ್ವರದ ಲಕ್ಷಣ ಕಾಣಿಸಿಕೊಂಡರೆ, ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮೆಹಬೂಬ ಗೋಳಸಂಗಿ ಶಿಕ್ಷಣ ಇಲಾಖೆಯ ಎಸ್.ಎಸ್.ರಾಮತಾಳ, ಮುಖ್ಯ ಶಿಕ್ಷಕರಾದ ಎಫ್ ಎಸ್ ಬಾಗವಾನ್, ಪತ್ರಕರ್ತರಾದ ಲಾಳೆಮಸಾಕ್ ನದಾಫ್, ಅಂಗನವಾಡಿ ಶಿಕ್ಷಕಿ ಪತ್ರುಮಾ ಕಡಕೋಳ, ಮೈರುನ ಮುಲ್ಲಾ ಇತರರು ಇದ್ದರು.