ಸಾರಾಂಶ
ಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.
ಹಿರಿಯೂರು ನಗರಸಭೆಗೆ ಭೇಟಿ ನೀಡಿದ್ದ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ
ಕನ್ನಡಪ್ರಭ ವಾರ್ತೆ ಹಿರಿಯೂರುಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.
ನಗರಸಭೆಗೆ ಶುಕ್ರವಾರ ಭೇಟಿ ನೀಡಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಯೊಂದಿಗೆ ವಿವಿಧ ಕಾಮಗಾರಿ ಹಾಗೂ ಮೂಲ ಸೌಕರ್ಯ ಬಗ್ಗೆ ವಿವರವಾಗಿ ಚರ್ಚಿಸಿದ ಅವರು, ನಗರದಲ್ಲಿ ಸ್ವಚ್ಛತೆ ಕಾಪಾಡುವುದು, ನೀರಿನ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ, ಕಸ ವಿಲೇವಾರಿ ಮಾಡುವುದು ಸೇರಿ ಮೂಲಭೂತ ಸೌಕರ್ಯ ಬಗ್ಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು.ರಸ್ತೆಯಲ್ಲಿ ಯಾರಾದರೂ ಕಸ ಎಸೆಯುವುದು ಕಂಡುಬಂದಲ್ಲಿ ಅಂತಹ ಅಂಗಡಿ ಮಾಲೀಕರು, ವರ್ತಕರಿಗೆ ದಂಡ ವಿಧಿಸಬೇಕು. ಪ್ಲಾಸ್ಟಿಕ್ ಮಾರಾಟ ಮಾಡುವುದು ಕಂಡುಬoದಲ್ಲಿ ದಾಳಿ ನಡೆಸಿ ದಂಡ ವಿಧಿಸಬೇಕು. ಕಂದಾಯ ವಸೂಲಾತಿ ಹೆಚ್ಚಾಗಬೇಕು ಎಂದು ಅವರು ಸೂಚಿಸಿದರು.
ಪೌರಾಯುಕ್ತ ಎಚ್ ಮಹoತೇಶ್, ಎಇಇ ರಾಜು, ಗೋವಿಂದರಾಜು, ಜಬೀವುಲ್ಲಾ, ಭೀಮರಾಜ್, ಆರೋಗ್ಯ ನೀರಿಕ್ಷಕರಾದ ಮೀನಾಕ್ಷಿ, ಮಹಲಿಂಗಪ್ಪ, ಅಶೋಕ ಮುಂತಾದವರು ಹಾಜರಿದ್ದರು.-------------ಹಿರಿಯೂರು ನಗರಸಭೆಗೆ ಶುಕ್ರವಾರ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು.