ಸಾರಾಂಶ
ಸಮರ್ಪಕವಾಗಿ ಮಳೆ ಬಾರದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು, ದನಕರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ. ಕಾವ್ಯರಾಣಿ ಹೇಳಿದರು. ಪಟ್ಟಣದ ವಿಶೇಷ ಎಪಿಎಂಸಿಯ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಸರಿಯಾದ ಮಳೆಯಾಗಿದ್ದರೆ ನೀರಿನ ಸಮಸ್ಯೆಯಾಗುತ್ತಿರಲಿಲ್ಲ. ಸರ್ಕಾರ ಈಗಾಗಲೇ ಬರ ಪೀಡಿತ ತಾಲೂಕವೆಂದು ಘೋಷಿಸಿದೆ. ಅದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕನ್ನಡ ಪ್ರಭವಾರ್ತೆ ಕಾರಟಗಿ
ಸಮರ್ಪಕವಾಗಿ ಮಳೆ ಬಾರದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು, ದನಕರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ. ಕಾವ್ಯರಾಣಿ ಹೇಳಿದರು.ಪಟ್ಟಣದ ವಿಶೇಷ ಎಪಿಎಂಸಿಯ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಸರಿಯಾದ ಮಳೆಯಾಗಿದ್ದರೆ ನೀರಿನ ಸಮಸ್ಯೆಯಾಗುತ್ತಿರಲಿಲ್ಲ. ಸರ್ಕಾರ ಈಗಾಗಲೇ ಬರ ಪೀಡಿತ ತಾಲೂಕವೆಂದು ಘೋಷಿಸಿದೆ. ಅದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ರೈತರ ಬೆಳೆ ಹಾನಿ ಸಮೀಕ್ಷೆ ವರದಿ, ದನಕರುಗಳಿಗೆ ಸರಿಯಾಗಿ ಕುಡಿಯುವ ನೀರಿನ ಸರಬರಾಜು, ನರೇಗಾದಡಿ ಕೂಲಿಕಾರರಿಗೆ ಕೆಲಸ ನೀಡುವುದು ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೃಷಿ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜೆಕ್ಸಾಂ, ಸಮುದಾಯ ಆರೋಗ್ಯ ಕೇಂದ್ರ, ಪಶು ಸಂಗೋಪನೆ, ಸೇರಿದಂತೆ ಇನ್ನಿತರ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆಗಳ ಪ್ರಗತಿ ವರದಿ ಮಂಡಿಸಿದರು.
ಈ ಸಂದರ್ಭಗಳಲ್ಲಿ ತಹಸೀಲ್ದಾರ ಎಂ.ಕುಮಾರಸ್ವಾಮಿ, ತಾಪಂ ಇಒ ಲಕ್ಷ್ಮೀದೇವಿ, ಪುರಸಭಾ ಮುಖ್ಯಾಧಿಕಾರಿ ಎಸ್ ಸುರೇಶ್ ಸೇರಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಯೋಜನಾಧಿಕಾರಿಗಳು, ಪಿಡಿಒಗಳು, ಕಾರ್ಯದರ್ಶಿಗಳು, ತಾಪಂ ಸಿಬ್ಬಂದಿ ಇದ್ದರು.