ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಗೆ ವಹಿಸಿ

| Published : Mar 03 2025, 01:50 AM IST

ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಗೆ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಆದರೆ ಚಿಂತಾಮಣಿ ಮತ್ತು ಶಿಡ್ಲಘಟ್ಟ ಭಾಗದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಕಾರಣವಾಗಿದ್ದು ಬೇಸಿಗೆಯಲ್ಲಿ ಕುಡಿಯುವ ನೀರಿಗೆ ವ್ಯತ್ಯಯ ಆಗಲಿದೆ. ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳು, ವಾರ್ಡ್‌ಗಳನ್ನು ಗುರ್ತಿಸಬೇಕು

ಕನ್ನಡಪ್ರಭ ವಾರ್ತೆ ಚಿಂತಾಮಣಿ

ಚಿಂತಾಮಣಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡು ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಕೈವಾರ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ೩.೫ ಕೋಟಿಗೆ ಹೆಚ್ಚಿನ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಅಭಾವ

ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಆದರೆ ಚಿಂತಾಮಣಿ ಮತ್ತು ಶಿಡ್ಲಘಟ್ಟ ಭಾಗದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದ ಮಳೆಯಾಗದಿರುವುದು, ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಕಾರಣವಾಗಿದ್ದು ಬೇಸಿಗೆಯಲ್ಲಿ ಕುಡಿಯುವ ನೀರಿಗೆ ವ್ಯತ್ಯಯ ಆಗಲಿದೆ. ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳು, ವಾರ್ಡ್‌ಗಳನ್ನು ಗುರ್ತಿಸಬೇಕು ಎಂದು ಸೂಚಿಸಿದರು.

ನೀರಿನ ಅಭಾವ ಉಂಟಾಗುವ ಗ್ರಾಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದು ನೀರು ಪೂರೈಸಲು ಮುಂದಾಗಬೇಕೆAದು ಅಧಿಕಾರಿಗಳೊಂದಿಗೆ ತುರ್ತು ಕ್ರಮ ಜರುಗಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಅನುದಾನದ ಕೊರತೆ ಹಾಗೂ ಅನುಮತಿಯ ಸಮಸ್ಯೆಗಳಿದ್ದಲ್ಲಿ ನನಗೆ ತಿಳಿಸಬೇಕು. ಯಾವುದೇ ತೊಂದರೆ ಇಲ್ಲದಿದ್ದರೆ ಕೊಳವೆ ಬಾವಿಗಳನ್ನು ಕೊರೆಯಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

ಕೈವಾರ ಹೋಬಳಿಯ ಕದಿರಾಪುರ ಪೂರ್ಣಗೊಂಡಿರುವ ರಸ್ತೆ ಕಾಮಗಾರಿ ಉದ್ಘಾಟನೆ, ಮಲ್ಲಿಕಾಪುರ ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕದ ಕಾಮಗಾರಿಗೆ ಭೂಮಿಪೂಜೆ, ಮಡಬಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಎರಡು ತರಗತಿ ಕೊಠಡಿಗಳ ಉದ್ಘಾಟನೆ, ಪೆರುಮಾಚನಹಳ್ಳಿ ಗ್ರಾ.ಪಂ ವ್ಯಾಪ್ತಿಯ ನಾಯಿಂದ್ರಹಳ್ಳಿ ಕಾಲೋನಿಯಲ್ಲಿ ಹಾಗೂ ನಾಯಿಂದ್ರಹಳ್ಳಿ ಶುದ್ಧಕುಡಿಯುವ ನೀರಿನ ಘಟಕಕ್ಕೆ ಭೂಮಿಪೂಜೆ, ಕೈವಾರದ ಕರ್ನಾಟಕ ಪಬ್ಲಿಕ್ ಶಾಲೆಯ ಹೆಚ್ಚುವರಿ ಶಾಲಾ ಕೊಠಡಿಗಳ ಮತ್ತು ಮೂಲಭೂತ ಸೌಕರ್ಯಗಳ ಮತ್ತು ಕೈವಾರ ಶಿಡ್ಲಘಟ್ಟ ಮುಖ್ಯರಸ್ತೆಯಿಂದ ಗೂಡುಬಾವಿಯವರೆಗಿನ ಸಿಸಿ ರಸ್ತೆ ಮತ್ತು ಕೈವಾರದಲ್ಲಿ ನಿರ್ಮಿಸಿರುವ ನಾಡಕಚೇರಿಯ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುದರ್ಶನ್ ಯಾದವ್, ತಾ.ಪಂ ಇಒ ಎಸ್ ಆನಂದ್, ಬಿಇಒ ಉಮಾದೇವಿ, ಅಕ್ಷರ ದಾಸೋಹ ಸುರೇಶ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಮುನಿನಾರಾಯಣಪ್ಪ, ಕೈವಾರ ಗ್ರಾ.ಪಂ. ಅಧ್ಯಕ್ಷೆ ಉಮಾದೇವಿ, ಸಂತೇಕಲ್ಲಹಳ್ಳಿ ಗೋವಿಂದಪ್ಪ, ಸಂತೇಕಲ್ಲಹಳ್ಳಿ ಮಹೇಶ್, ಕೈವಾರ ಸಾಮ್ರಾಟ್, ಗ್ರಾ.ಪಂ. ಮಾಜಿ ಚಂದ್ರಪ್ಪ, ಟಿಎಪಿಎಂಎಸ್ ಮಾಜಿ ಉಪಾಧ್ಯಕ್ಷ ಬಾಲರಾಜ್, ಕೆಂಪದೇನಹಳ್ಳಿ ನಾಗೇಶ್, ಅಂಬರೀಶ್, ಬಳೇ ನಾಗರಾಜ್, ಮಂಜುನಾಥರೆಡ್ಡಿ, ತಳಗವಾರ ಪ್ರಕಾಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಡಾಬಾ ನಾಗರಾಜ್, ಪಿಡಿಒಗಳಾದ ಕರಿಬಸಪ್ಪ, ಶ್ರೀಧರ್ ಬಾಬು, ಮಹೇಂದ್ರಯಾದವ್, ಅಮೂಲ್ಯ ಮುಖ್ಯಶಿಕ್ಷಕರು, ಶಿಕ್ಷಕರು. ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷ ಶ್ರೀರಾಮ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.