ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

| Published : Jul 09 2024, 12:57 AM IST / Updated: Jul 09 2024, 09:18 AM IST

ಸಾರಾಂಶ

ಕೊಲ್ಹಾರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಡೆಂಘೀ ನಿಯಂತ್ರಿಸಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್‌ ಎಸ್.ಎಸ್.ನಾಯಕಲ್ ಮಠ ಸೂಚಿಸಿದರು.

 ಕೊಲ್ಹಾರ :  ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಡೆಂಘೀ ನಿಯಂತ್ರಿಸಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್‌ ಎಸ್.ಎಸ್.ನಾಯಕಲ್ ಮಠ ಸೂಚಿಸಿದರು.

ಇಲ್ಲಿನ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಡೆಂಘೀ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ಮಾಡಲು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಿ ಮಾತನಾಡಿದ ಅವರು, ಕೊಲ್ಹಾರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡ್‌ಗಳಲ್ಲಿ ಫಾಗಿಂಗ್ ಹಾಗೂ ಯಾವುದೇ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಡೆಂಘೀ ನಿಯಂತ್ರಣ ಕುರಿತು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.ಪ್ರತಿ ದಿನ ಡೆಂಘೀ ನಿಯಂತ್ರಣ ಕುರಿತು ಗ್ರಾಮಗಳಲ್ಲಿ ಡಂಗೂರ ಹಾಕುವ ಮೂಲಕ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಲಾಯಿತು. 

ಪ್ರತಿ ಶುಕ್ರವಾರ ಹಾಗೂ ಶನಿವಾರ ವಿಶೇಷ ಅಭಿಯಾನ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲು ತಿಳಿಸಿದರು.ಈ ವೇಳೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ತಾಲೂಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಲಕ್ಷ್ಮೀ ತೆಲೂರ, ಬಸವನ ಬಾಗೇವಾಢಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪೂರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ ಚಲವಾದಿ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಬಸವನ ಬಾಗೇವಾಡಿ ಆರೋಗ್ಯ ನಿರೀಕ್ಷಕ ಆರ್.ಎಂ.ಚಿಂಚೊಳ್ಳಿ ಸ್ವಾಗತಿಸಿ, ನಿರೂಪಿಸಿದರು.