ಸುರಕ್ಷತಾ ಸಾಧನೆ ಬಳಸಿ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಿ

| Published : Aug 27 2025, 01:00 AM IST

ಸುರಕ್ಷತಾ ಸಾಧನೆ ಬಳಸಿ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸುರಕ್ಷತಾ ಸಾಧನೆಗಳನ್ನು ಬಳಸುವ ಮೂಲಕ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಸುರಕ್ಷತಾ ಸಾಧನೆಗಳನ್ನು ಬಳಸುವ ಮೂಲಕ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.ಪಟ್ಟಣದ ಚೆಸ್ಕಾಂ ಲೈನ್ ಮೆನ್ ರಾಹುಲ್ ವಿದ್ಯುತ್ ಅವಘಡದಿಂದ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿ ನಂತರ ಚೆಸ್ಕಾಂ ಅಧಿಕಾರಿ ಜೊತೆ ಮಾತನಾಡಿದರು.

ಚೆಸ್ಕಾಂ ಎ ಇ. ಇ ರಂಗಸ್ವಾಮಿ ಅವರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ನಿಮ್ಮ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ ಎಂ.ಡಿ ಜೊತೆ ಮಾತನಾಡಿದ್ದೇನೆ. ಅವರ ಕುಟುಂಬದವರಿಗೆ ನಿಮ್ಮ ಇಲಾಖೆ ವತಿಯಿಂದ ಸಿಗುವ ಸೂಕ್ತ ಪರಿಹಾರವನ್ನು ಸಕಾಲದಲ್ಲಿ ನೀಡಲು ಕ್ರಮ ಕೈಗೊಳ್ಳಿ. ಜೊತೆಗೆ ಅನುಕಂಪದ ಆಧಾರದ ಮೇಲೆ ಅವರ ಪತ್ನಿಗೆ ಕೆಲಸ ನೀಡಲು ಕ್ರಮ ಕೈಗೊಳ್ಳಿ ಎಂದರು.

ನಂತರ ಕುಟುಂಬದವರಿಗೆ ಸ್ವಾಂತ್ವಾನ ಹೇಳಿ ಈ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಘಟನೆ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಿ ಕುಟುಂಬಕ್ಕೆ ಸೇರಬೇಕಾಗಿರುವ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಜೊತೆಗೆ ಮುಂದಿನ ದಿನಗಳಲ್ಲಿ ಸಹ ಯಾವುದೇ ವಿಚಾರಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ತಕ್ಷಣ ಸ್ಪಂದಿಸುವುದಾಗಿ ತಿಳಿಸಿದರು

ಮಳೆಗಾಲ ಸಂದರ್ಭದಲ್ಲಿ ಕೆಲಸ ನಿರ್ವಹಿಸುವ ಚೆಸ್ಕಾಂ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯುತ್ ಅವಘಡಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.