ಸಾರಾಂಶ
ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಪ್ರಮುಖವಾಗಿ ಮನೆಯ ಸುತ್ತಮುತ್ತಲಿನ ಆವರಣವನ್ನು, ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ರಟ್ಟೀಹಳ್ಳಿ: ಡೆಂಘೀ ಜ್ವರ ನಿಯಂತ್ರಣದ ಬಗ್ಗೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವುದು ಮುಖ್ಯ. ಈ ರೋಗ ಲಕ್ಷಣ ಹೆಚ್ಚಾಗಿ ಮಕ್ಕಳಲ್ಲಿ ಕಾಣಿಸಿಕೊಳ್ಳುವುದರಿಂದ ಪಾಲಕರು ಅಗತ್ಯ ಮುಂಜಾಗ್ರತೆ ವಹಿಸುವುದು ಮುಖ್ಯ ಎಂದು ಆರೋಗ್ಯಾಧಿಕಾರಿ ನಾಗರಾಜ ಪ್ಯಾಟಿ ತಿಳಿಸಿದರು.ಪಟ್ಟಣದ ಕರಬಸಜ್ಜಯ್ಯ ದೇವಸ್ಥಾನದ ಆವರಣದಲ್ಲಿ ಡೆಂಘೀ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿ, ವೃದ್ದರಲ್ಲಿ ಜ್ವರದ ಲಕ್ಷಣ ಕಂಡುಬಂದರೆ ನಿರ್ಲಕ್ಷ್ಯ ವಹಿಸದೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಪ್ರಮುಖವಾಗಿ ಮನೆಯ ಸುತ್ತಮುತ್ತಲಿನ ಆವರಣವನ್ನು, ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಳೆಯ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅನುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಬೇಕು ಎಂದರು.ಆರೋಗ್ಯ ಇಲಾಖೆಯಿಂದ ಸಮಸ್ಯಾತ್ಮಕ ಪ್ರದೇಶಗಳಿಗೆ ಉಚಿತವಾಗಿ ಸೊಳ್ಳೆ ಪರದೆ, ಕೀಟನಾಶಕ, ಲಾರ್ವಾಹಾರಿ ಮೀನುಗಳನ್ನು ಬಾವಿ, ಕೆರೆ, ಕುಂಟೆಗಳಲ್ಲಿ ಬಿಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಗ್ರಾಮ ಮಟ್ಟದಲ್ಲಿ ರಕ್ತ ಪರೀಕ್ಷೆ ಮತ್ತು ಮಲೇರಿಯಾ ಜ್ವರಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಸುಮಾ ಬಣಕಾರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.ಸುಗಮ್ಯ ಯಾತ್ರಾ ಅಭಿಯಾನಕ್ಕೆ ಚಾಲನೆಸವಣೂರು: ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಅಂಗವಿಕಲರಿಗೆ ಶೌಚಾಲಯ ಇರುವುದು ಕಡ್ಡಾಯವಾಗಿದೆ ಎಂದು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅಂಗವಿಕಲರ ಸುಗಮ್ಯ ಯಾತ್ರಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲೂಕಿನಲ್ಲಿ ಪ್ರತಿಯೊಂದು ಸರ್ಕಾರಿ ಇಲಾಖೆ ಹಾಗೂ ಅರೆ ಸರ್ಕಾರಿ ಇಲಾಖೆಯಲ್ಲಿ ಅಂಗವಿಕಲರಿಗೆ ವೀಲ್‌ಚೇರ್ ಹಾಗೂ ಶೌಚಾಲಯ ಇರುವ ಬಗ್ಗೆ ವಿಆರ್‌ಡಬ್ಲ್ಯು, ಎಂಆರ್‌ಡಬ್ಲ್ಯು ಮೂಲಕ ಪ್ರತಿಯೊಂದು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಭರತರಾಜ ಕೆ.ಎನ್. ಇತರರು ಇದ್ದರು.