- ತರೀಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ।ಹಣದ ಕೊರತೆ ಇಲ್ಲ
ಕನ್ನಡಪ್ರಭ ವಾರ್ತೆ ತರೀಕೆರೆಹಣದ ಕೊರತೆ ಇಲ್ಲ. ತಾಲೂಕಿನಲ್ಲಿ ಅಗತ್ಯವಿದ್ದ ಕಡೆಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ವಹಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ 2025-26ನೇ ಸಾಲಿನ 3ನೇ ಮತ್ತು 4ನೆ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು. ತಾಲೂಕಿನಲ್ಲಿ ನೀರಿನ ಲಭ್ಯತೆ, ಬೋರ್ ವೆಲ್ ನಿಂದ ನೀರನ್ನು ಸಂಗ್ರಹಿಸಿ ಅಗತ್ಯ ಇರುವ ಕಡೆ ಪೈಪ್ ಲೈನ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಎಲ್ಲೂ ಉಂಟಾಗಬಾರದು ಕುಡಿಯುವ ನೀರಿನ ಸರಬರಾಜಿಗೆ ಹಣದ ಕೊರತೆ ಇಲ್ಲ ಎಂದು ಹೇಳಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ ಮಾತನಾಡಿ ತಾಲೂಕಿನ ಬೆಟ್ಟದಹಳ್ಳಿ ಮತ್ತು ದೋರನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡಲೆ ಬಗೆಹರಿಸಲಾಗುವುದು ಎಂದು ಹೇಳಿದರು.25 ರಿಂದ 30 ಹಳ್ಳಿಗಳಲ್ಲಿ ಬೋರ್ ವೆಲ್ ಅವಶ್ಯಕತೆ ಬಗ್ಗೆ ಮನವಿ ಬಂದಿದ್ದು ಅವಶ್ಯಕತೆ ನೋಡಿಕೊಂಡು ಬೋರ್ ವೆಲ್ ಕೊರೆಸುವ ಅಥವಾ ರಿಚಾಜ್ ಮಾಡಿಕೊಡುವ ಮೂಲಕ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುವುದು ಎಂದರು.ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಶೌಚಾಲಯ, ಸ್ನಾನದ ಗೃಹಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಎಲ್ಲಾ ವಸತಿ ನಿಲಯಗಳಿಗೆ ಭೇಟಿ ಕೊಟ್ಟು ವಸತಿ ನಿಲಯಗಳ ಶೌಚಾಲಯ, ಸ್ನಾನದ ಗೃಹಗಳ ಸ್ವಚ್ಛತೆ ಬಗ್ಗೆ ವರದಿ ಕೊಡಬೇಕು ಎಂದು ಸೂಚಿಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್ ಮಾತನಾಡಿ ಸಮುದಾಯ ಆರೋಗ್ಯ ಕೇಂದ್ರ ಅಜ್ಜಂಪುರದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ತಜ್ಞ ವೈದ್ಯರನ್ನು ನೇಮಿಸಿ ಅಗತ್ಯ ಯಂತ್ರೋಪಕರಣಗಳನ್ನು ಕೊಡಿಸಿ, ತಿಂಗಳಿ ನಿಂದ ಸಿಸೇರಿಯನ್ ಹೆರಿಗೆ ಸೌಲಭ್ಯ ಪ್ರಾರಂಭಿಸಿದ್ದು ಇದುವರೆಗೆ 31 ಸಿಸೇರಿಯನ್ ಹೆರಿಗೆ, ಗರ್ಭಕೋಶದ ಸಮಸ್ಯೆಗೆ ಸಂಬಂಧಿಸಿದಂತೆ 13 ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅಜ್ಜಂಪುರ ಭಾಗದ ಜನರಿಗೆ ಸಿಸೇರಿಯನ್. ಹೆರಿಗೆಗೆ ಬೇರೆ ಕಡೆ ಹೋಗುವುದು ಪ್ರಸ್ತುತ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಶ್ರಮದಿಂದ ತರೀಕೆರೆ ತಾಲೂಕಿಗೆ 5 ಮತ್ತು ಅಜ್ಜಂಪುರ ತಾಲೂಕಿಗೆ ₹4.65 ಲಕ್ಷ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ನೂತನ ಕಟ್ಟಡ ಮಂಜೂರಾಗಿದೆ. ಮೂರು ಕಟ್ಟಡಗಳ ಕಾಮಗಾರಿ ಪ್ರಾರಂಭವಾಗಿದ್ದು ಉಳಿದ ಕಟ್ಟಡಗಳು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಹೇಳಿದರು.ಕೆಡಿಪಿ ಸದಸ್ಯರಾದ ರಚನಾ ಶ್ರೀನಿವಾಸ್, ಮಲ್ಲಿಕಾರ್ಜುನ್, ಅನ್ಬು, ಮೆಹಬೂಬ್, ಎಚ್.ಎನ್.ಮಂಜುನಾಥ್ ಲಾಡ್, ಕೆಡಿಪಿ ಸದಸ್ಯ ವಿವಿಧ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಕೆಡಿಪಿ ಸದಸ್ಯರು, ಉಪವಿಭಾಗಾಧಿಕಾರಿ ಎನ್.ವಿ.ನಟೇಶ್ , ತಹಸೀಲ್ದಾರ್ ರಶ್ನಿ, ತಾಪಂ ಅಡಳಿತಾಧಿಕಾರಿ ರಾಜಗೋಪಾಲ್, ಅಜ್ಜಂಪುರ ತಹಸೀಲ್ದಾರ್ ವಿನಾಯಕ ಸಾಗರ್, ಇ.ಒ. ವಿಜಯ ಕುಮಾರ್ ಮತ್ತಿತರರು ಭಾಗವಹಿಸಿದ್ದರು. -26ಕೆಟಿಆರ್.ಕೆ.5ಃ
ತರೀಕೆರೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪವಿಭಾಗಾಧಿಕಾರಿ
ಎನ್.ವಿ.ನಟೇಶ್, ತರೀಕೆರೆ ತಹಸೀಲ್ದಾರ್ ರಶ್ಮಿ, ಅಜ್ಜಂಪುರ ತಹಸೀಲ್ದಾರ್ ವಿನಾಯಕ ಸಾಗರ್, ಇ.ಒ.ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.