ಕನ್ನಡಪ್ರಭ ವಾರ್ತೆ ಸವದತ್ತಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಮನುಷ್ಯರಷ್ಟೆ ಅಲ್ಲ ಪ್ರಾಣಿ ಸಂಕುಲಕ್ಕೂ ತೊಂದರೆಯಾಗುತ್ತಿದೆ. ಇದರಿಂದ ತಾಲೂಕಿನಾದ್ಯಂತ ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು..

ಕನ್ನಡಪ್ರಭ ವಾರ್ತೆ ಸವದತ್ತಿ

ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಮನುಷ್ಯರಷ್ಟೆ ಅಲ್ಲ ಪ್ರಾಣಿ ಸಂಕುಲಕ್ಕೂ ತೊಂದರೆಯಾಗುತ್ತಿದೆ. ಇದರಿಂದ ತಾಲೂಕಿನಾದ್ಯಂತ ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ಪಟ್ಟಣದ ಕೃಷಿ ಇಲಾಖೆಯ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಕರೆದ ಕುಡಿಯುವ ನೀರಿನ ತುರ್ತು ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆಯ ಕುರಿತು ತಾಲೂಕಿನ ಎಲ್ಲ ಅಧಿಕಾರಿಗಳು ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಹನೆಯಿಂದ ನಡೆದುಕೊಂಡು ಪರಿಸ್ಥಿತಿಯನ್ನು ನಿಭಾಯಿಸುವಂತೆ ಸೂಚನೆ ನೀಡಿದರು.

ಬಹುತೇಕ ಸವದತ್ತಿ ತಾಲೂಕಿನ ಯಾವ ಗ್ರಾಮಗಳಲ್ಲಿಯೂ ಅಷ್ಟೊಂದು ಪ್ರಮಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೂ ಸಹಿತ ತಾಂತ್ರಿಕ ತೊಂದರೆಯಿಂದಾಗಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕುಡಿಯುವ ನೀರಿನ ಸಮಸ್ಯೆ ಆಗಿರಬಹುದು. ಅದನ್ನು ಅಧಿಕಾರಿಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು. ಅದರಂತೆ ಜಾನುವಾರುಗಳಿಗೂ ಕೂಡ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ತಾಪಂ ಇಒ ಆನಂದ ಬಡಕುಂದ್ರಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಪ್ರಸಾದ್ ಪಾಟೀಲ್, ವಿದ್ಯುತ್ ಪ್ರಸರಣ ನಿಗಮದ ಸಹಾಯಕ ಅಭಿಯಂತರ ಮಹೇಂದ್ರ ವಿಶಾಪುರಕರ, ಎಚ್.ಎ.ಕದ್ರಾಪುರಕರ ಮತ್ತು ತಾಲೂಕ ಮಟ್ಟದ ಅಧಿಕಾರಿಗಳಾದ ಅಯ್ಯನಗೌಡರ, ಗಿರೀಶ್ ಚೌಹಾಣ್ ಸೇರಿದಂತೆ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು