ಕನ್ನಡಪ್ರಭವಾರ್ತೆ ನಾಪೋಕ್ಲು ಹಿಂದೂ ಸಂಗಮ ಕಾರ್ಯಕ್ರಮ ಆಯೋಜನ ವೇಳೆ ಅಹಿತಕರ ಘಟನೆ ನಡೆದಿದ್ದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಯದುವೀರ್ ಒಡೆಯರ್ ಸರ್ಕಾರವನ್ನು ಒತ್ತಾಯಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಂಸದರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಿಗೆ ಬದುಕಲು ಕಷ್ಟ ಆಗುತ್ತಿದೆ ಎಂಬುದು ಗಂಭೀರವಾದ ವಿಚಾರ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ವ್ಯವಸ್ಥೆ ಕಾಪಾಡಬೇಕು ಎಂದರು. ಎಲ್ಲರಿಗೂ ಒಂದೇ ಕಾನೂನು ಮಾಡುವಂತಾಗಬೇಕು. ಕೋಮುವಾದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಅವರಿಗೆ ಸೂಚಿಸಿದರು. ಬಿಜೆಪಿ ಮುಖಂಡ ಮನು ಮುತ್ತಪ್ಪ ಮಾತನಾಡಿ ಹಿಂದೂ ಬಾಂಧವರು ನಾಪೋಕ್ಲು ಪಟ್ಟಣಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿದೆ. ಹಿಂದು ಕಾರ್ಯಕರ್ತರ ಮೇಲೆ ಹತ್ತಾರು ಕಾನೂನುಗಳನ್ನು ಹೇರಲಾಗುತ್ತಿದೆ. ಒಂದು ಕೋಮಿನವರಿಗೆ ಒಂದು ಕಾನೂನು ಮತ್ತೊಂದು ಕೋಮಿನವರಿಗೊಂದು ಕಾನೂನು ಹೇರಿ ತಾರತಮ್ಯ ಮಾಡಲಾಗುತ್ತಿದೆ. ಬಂಟಿಂಗ್ ಇರಿಸಿಕೊಳ್ಳಲು ಮೂರು ದಿನ ಕಾಲಾವಕಾಶವನ್ನು ನೀಡುತ್ತಿಲ್ಲ ಎಂದ ಆರೋಪಿಸಿದರು. ಮಾಜಿ ಮಂತ್ರಿ , ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಳ್ಳಮ್ಮ ವಟ್ಟಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕರವಂಡ ಲವ ನಾಣಯ್ಯ , ವಿರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಸುಬ್ರಮಣಿ, ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯದರ್ಶಿ ಉಕ್ಕುಳಂಡ್ರ ಧನೋಜ್ , ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಕರವಂಡ ಅಪ್ಪಣ್ಣ ಸೇರಿದಂತೆ ಇತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶಿವಚಾಳಿಯoಡ ಜಗದೀಶ್, ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲ ಉಪಾಧ್ಯಕ್ಷ ಅಮ್ಮಂಡ ಮನು ಮಹೇಶ್, ಮಡಿಕೇರಿ, ಬಿಜೆಪಿ ಮಂಡಲ ಗ್ರಾಮಾಂತರ ಓಬಿಸಿ ಅಧ್ಯಕ್ಷ ಬಿಎಂ ಪ್ರತೀಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿಎ ಹರೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಉಮಾ ಪ್ರಭು, ಬಳ್ಳಮ್ಮಮಾಟ್ಟಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ್, ಪಾರಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನೀಲಮ್ಮ. ಬಿಜೆಪಿ ಪಕ್ಷದ ಪದಾಧಿಕಾರಿಗಳು ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರು, ಪಾಲ್ಗೊಂಡಿದ್ದರು.
ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಂಸದ ಯದುವೀರ್
ಹಿಂದೂ ಸಂಗಮ ಕಾರ್ಯಕ್ರಮ ಆಯೋಜನ ವೇಳೆ ಅಹಿತಕರ ಘಟನೆ ನಡೆದಿದ್ದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಯದುವೀರ್ ಒಡೆಯರ್ ಸರ್ಕಾರವನ್ನು ಒತ್ತಾಯಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.