ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಚಿವ ರಾಮಲಿಂಗಾರೆಡ್ಡಿ

| Published : Oct 29 2024, 01:52 AM IST / Updated: Oct 29 2024, 08:53 AM IST

Ramalingareddy
ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಚಿವ ರಾಮಲಿಂಗಾರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹೆಚ್ಚುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

 ಬೆಂಗಳೂರು : ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹೆಚ್ಚುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ನಗರದಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸಲು ಬಿಎಂಟಿಸಿ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಇಂತಹ ಸಿಬ್ಬಂದಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಹಲ್ಲೆ ಮಾಡುತ್ತಿದ್ದಾರೆ. ಕಳೆದೊಂದು ತಿಂಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಇದರಿಂದ ಚಾಲಕರು ಮತ್ತು ನಿರ್ವಾಹಕರು ನಿರಾತಂಕವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನಿಗಮದಿಂದ ಇದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಹಲ್ಲೆ ಪ್ರಕರಣಗಳ ಕುರಿತಂತೆ ಬಿಎಂಟಿಸಿ ಘಟಕದ ಅಧಿಕಾರಿಗಳು ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಚಿವರು ಸೂಚಿಸಿದ್ದಾರೆ.

ಬಿಎಂಟಿಸಿ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ತಾವು ಸೂಚಿಸಬೇಕು. ಹಲ್ಲೆಕೋರರ ವಿರುದ್ದ ಕಠಿಣ ಕ್ರಮವಾಗುವಂತೆ ನೋಡಿಕೊಳ್ಳಬೇಕೆಂದು ಸಚಿವರು ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.