ಸಂಚಾರ ನಿಯಮ ಜಾರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

| Published : Sep 01 2024, 01:47 AM IST

ಸಾರಾಂಶ

ಗದಗ-ಬೆಟಗೇರಿ ಅವಳಿ ನಗರವನ್ನು ಬಿಟ್ಟರೆ ಗಜೇಂದ್ರಗಡ ಪಟ್ಟಣದಲ್ಲಿ ಟ್ರಾಫಿಕ್ ಸಿಗ್ನಲ್, ಸಿಸಿ ಕ್ಯಾಮೆರಾ ಅಳವಡಿಕೆ

ಗಜೇಂದ್ರಗಡ: ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಹಾಗೂ ಸಂಚಾರ ನಿಯಮ ಜಾರಿಗೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಸ್ಥಳೀಯ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಪೊಲೀಸ್‌ ಚೌಕಿ, ಟ್ರಾಫಿಕ್ ಸಿಗ್ನಲ್ ಹಾಗೂ ಸಿಸಿ ಕ್ಯಾಮೆರಾ ಉದ್ಘಾಟಿಸಿ ಮಾತನಾಡಿದ ಅವರು, ಗಜೇಂದ್ರಗಡ ಪಟ್ಟಣ ಸಾಕಷ್ಟು ಬೆಳವಣಿಗೆ ಹೊಂದುತ್ತಿದ್ದು ವಾಹನಗಳ ಸಂಚಾರ ಜತೆಗೆ ದಟ್ಟಣೆ ಸಹ ಹೆಚ್ಚಾಗಿ ಟ್ರಾಫೀಕ್ ಸಮಸ್ಯೆಯಾಗುವ ಪರಿಣಾಮ ವೈಜ್ಞಾನಿಕ ಮಾದರಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಪರಿಣಾಮ ತರಕಾರಿ, ಹಣ್ಣು, ಹೂ ವ್ಯಾಪಾರಸ್ಥರಿಗೆ ಬೇರೆಡೆ ಸ್ಥಳಾಂತರಗೊಳಿಸಲಾಗಿದೆ. 1985 ರಲ್ಲಿ ಎಪಿಎಂಸಿ ಅಧ್ಯಕ್ಷನಿದ್ದಾಗ ಹೊಸದಾಗಿ ಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಿದ್ದೇನು. ಈಗ ಅಲ್ಲಿಯೂ ಸಹ ಜಾಗೆಯ ಕೊರತೆಯ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾಗಿ ಶೀಘ್ರದಲ್ಲೇ 40 ಎಕರೆ ಜಾಗೆಯಲ್ಲಿ ನೂತನ ಮಾರುಕಟ್ಟೆಯ ನಿರ್ಮಾಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಜೋಡು ರಸ್ತೆಯಲ್ಲಿ ವ್ಯಾಪಾರ ಕುಂಠಿತ ಆಗುತ್ತದೆ ಎಂಬುದು ಸಮಂಜಸವಲ್ಲ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಗದಗ-ಬೆಟಗೇರಿ ಅವಳಿ ನಗರವನ್ನು ಬಿಟ್ಟರೆ ಗಜೇಂದ್ರಗಡ ಪಟ್ಟಣದಲ್ಲಿ ಟ್ರಾಫಿಕ್ ಸಿಗ್ನಲ್, ಸಿಸಿ ಕ್ಯಾಮೆರಾ ಅಳವಡಿಕೆ ಹಾಗೂ ಪ್ರಮುಖ ಕಾಲಕಾಲೇಶ್ವರ ವೃತದಲ್ಲಿ ಪೊಲೀಸ್‌ ಚೌಕಿಯ ನಿರ್ಮಾಣವನ್ನು ಸ್ಥಳೀಯ ಪುರಸಭೆ, ಶಾಸಕರ ನಿಧಿಯಿಂದ ನಿರ್ಮಾಣ ಮಾಡಲಾಗಿದೆ. ಸಂಚಾರಿ ನಿಯಮ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ಡಿವೈಎಸ್‌ಪಿ ಪ್ರಭುಗೌಡ ಕಿರೇದಳ್ಳಿ, ಸಿಪಿಐ ಸಿದ್ದು ಬೀಳಗಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಪಿಎಸ್‌ಐ ಸೋಮನಗೌಡ ಗೌಡ್ರ, ಪುರಸಭೆ ವಿಪಕ್ಷನಾಯಕ ಮುರ್ತುಜಾ ಡಾಲಾಯತ, ಸದಸ್ಯರಾದ ಶಿವರಾಜ ಘೋರ್ಪಡೆ, ರಾಜು ಸಾಂಗ್ಲಿಕರ, ವೆಂಕಟೇಶ ಮುದಗಲ್ಲ ಹಾಗೂ ಸಿದ್ದಣ್ಣ ಬಂಡಿ, ಚಂಬಣ್ಣ ಚವಡಿ, ನಾಗುಸಾ ಬಸವಾ, ಎ.ಡಿ. ಕೋಲಕಾರ, ಉಮೇಶ ರಾಠೋಡ, ಶ್ರೀಧರ ಬಿದರಳ್ಳಿ, ಸಿದ್ದು ಗೊಂಗಡಶೆಟ್ಟಿಮಠ, ತುಳಸಿನಾಥ ಮಾಳೊತ್ತರ, ಅಂದಪ್ಪ ರಾಠೋಡ ಸೇರಿದಂತೆ ಇತರರು ಇದ್ದರು.