ಮನೆಗೊಂದು ಮರ, ಊರಿಗೊಂದು ವನ ನಿರ್ಮಾಣಕ್ಕೆ ಮುಂದಾಗಿ

| Published : Jun 19 2024, 01:03 AM IST

ಮನೆಗೊಂದು ಮರ, ಊರಿಗೊಂದು ವನ ನಿರ್ಮಾಣಕ್ಕೆ ಮುಂದಾಗಿ
Share this Article
  • FB
  • TW
  • Linkdin
  • Email

ಸಾರಾಂಶ

ಮನೆಗೊಂದು ಮರ, ಊರಿಗೊಂದು ವನ ಎಂಬ ನಾಡುನುಡಿಯಂತೆ ಪ್ರತಿಯೊಬ್ಬರು ಗಿಡ-ಮರ ಬೆಳೆಸಬೇಕೆಂದು ಕೃಷ್ಣಾವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪೀಠಾಧಿಪತಿ ಕರುಣೇಶ್ವರ ಶಿವಾಚಾರ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮನೆಗೊಂದು ಮರ, ಊರಿಗೊಂದು ವನ ಎಂಬ ನಾಡುನುಡಿಯಂತೆ ಪ್ರತಿಯೊಬ್ಬರು ಗಿಡ-ಮರ ಬೆಳೆಸಬೇಕೆಂದು ಕೃಷ್ಣಾವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪೀಠಾಧಿಪತಿ ಕರುಣೇಶ್ವರ ಶಿವಾಚಾರ್ಯರು ಹೇಳಿದರು.

ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮದ ಸಂಗಮೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಧುನಿಕತೆ ಭರದಲ್ಲಿ ಗಿಡ-ಮರ ನಾಶ ಮಾಡಲಾಗುತ್ತಿದೆ. ಇದರಿಂದ ಪಕ್ಷಿ, ಪ್ರಾಣಿ ಹಾಗೂ ಮನುಕುಲಕ್ಕೆ ಕಂಟಕ ಉಂಟಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ಹೊಲ-ಗದ್ದೆ, ಮನೆ ಸುತ್ತಮುತ್ತ ಸಸಿ ನೆಟ್ಟು ಪೋಷಣೆ ಮಾಡಬೇಕು. ಅಂದಾಗ ಮಾತ್ರ ಒಳ್ಳೆ ಮಳೆ, ಬೆಳೆ, ಗಾಳಿ ಹಾಗೂ ಉತ್ತಮ ವಾತಾವರಣ ಸಿಗುತ್ತದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಅತಿ ಹೆಚ್ಚು ಸಸಿ ನೆಟ್ಟು ಪೋಷಣೆ ಮಾಡುವುದರ ಜೊತೆಗೆ ಪರಿಸರ ನಾಶದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸಲು ಮುಂದಾಗುವಂತೆ ಸಲಹೆ ನೀಡಿದರು. ವೇದಮೂರ್ತಿ ವೀರಭದ್ರಯ್ಯ ಸ್ವಾಮಿ ದೇವಸೂಗೂರು, ಶಿವಯ್ಯ ಸ್ವಾಮಿ ಇತರರಿದ್ದರು.