ಕಾಂಗ್ರೆಸ್ ಪಕ್ಷದ ಸಂಘಟನೆ ತಳಮಟ್ಟದಿಂದ ಬಲಪಡಿಸುವುದರೊಂದಿಗೆ ಪಕ್ಷದ ತತ್ವ ಮತ್ತು ಸಿದ್ಧಾಂತ ಜನರಿಗೆ ತಲುಪಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು

ಹರಪನಹಳ್ಳಿ: ಪಕ್ಷದ ಆಶಯ ಹಾಗೂ ಜನಪರ ಕಾರ್ಯಕ್ರಮ ಮನೆಮನೆಗೆ ತಲುಪಿಸುವ ಮೂಲಕ ಸಂಘಟನೆ ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಪಕ್ಷದ ಪದಾಧಿಕಾರಿಗಳಿಗೆ ತಿಳಿಸಿದರು.

ಅವರು ಪಟ್ಟಣದ ಕಾಶೀಮಠದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಹರಪನಹಳ್ಳಿ ಮತ್ತು ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆ ತಳಮಟ್ಟದಿಂದ ಬಲಪಡಿಸುವುದರೊಂದಿಗೆ ಪಕ್ಷದ ತತ್ವ ಮತ್ತು ಸಿದ್ಧಾಂತ ಜನರಿಗೆ ತಲುಪಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಜಾತ್ಯತೀತ ನಿಲುವು ಹಾಗೂ ಜನಪರ ಚಿಂತನೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವುದು ಕಾರ್ಯಕರ್ತರ ಜವಾಬ್ದಾರಿಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಮೂಲಕ ಪಕ್ಷದ ಚಟುವಟಿಕೆ ಪರಿಣಾಮಕಾರಿಯಾಗಿ ಮುನ್ನಡೆಸಬೇಕು ಎಂದು ತಿಳಿಸಿದರು.

ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಅಲ್ಲದೇ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಜನರೊಂದಿಗೆ ನಿರಂತರ ಸಂಪರ್ಕ ಹೊಂದಬೇಕು ಎಂದು ತಿಳಿಸಿದರು.

ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕುಬೇರ್ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಆಶಯ ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಮೂಲಕ ಪಕ್ಷದ ಮೇಲಿನ ವಿಶ್ವಾಸ ಮತ್ತಷ್ಟು ಗಟ್ಟಿಗೊಳಿಸಬೇಕು. ಪಕ್ಷದ ಪ್ರತಿಯೊಂದು ಕಾರ್ಯಕ್ರಮದಲ್ಲೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆ ಬಲಿಷ್ಠಗೊಳಿಸಲು ಶ್ರಮಿಸಬೇಕು ಎಂದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆ ಪಕ್ಷದ ಸಂಘಟನೆಯನ್ನು ವ್ಯವಸ್ಥಿತವಾಗಿ ರೂಪಿಸುವುದು, ಗ್ರಾಪಂ ಮತ್ತು ವಾರ್ಡ ಮಟ್ಟದಲ್ಲಿ ಪಕ್ಷದ ಚಟುವಟಿಕೆ ಚುರುಕುಗೊಳಿಸುವುದು ಹಾಗೂ ಪ್ರಚಾರ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ್ ಕೃಷ್ಣನಾಯ್ಕ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಕಮ್ಮಾರ ಮಂಜುನಾಥ್, ಅಬ್ದುಲ್ ರೆಹಮಾನ್ ಸಾಹೇಬ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ್ ಶಂಕರ್, ವಕೀಲ ಗೋಣಿಬಸಪ್ಪ, ಟಿ. ವೆಂಕಟೇಶ್ ಮಾತನಾಡಿದರು.

ಈ ಸಂದರ್ಭದಲ್ಲಿ ಚಿಗಟೇರಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ದೇವೇಂದ್ರ ಗೌಡ, ಕಂಚಿಕೆರೆ ಜಯಲಕ್ಷ್ಮಿ, ಯಲ್ಲಾಪುರ ಕೆಂಚಪ್ಪ, ವಿ.ಹಾಲೇಶ್, ಆರ್. ಶಶಿಕುಮಾರ್ ನಾಯ್ಕ್, ನೇತ್ರಾವತಿ, ಎಲ್.ಮಂಜಾನಾಯ್ಕ್,ವರ‍್ಯಾ ನಾಯ್ಕ್, ಕಂಚಿಕೆರೆ ಅಂಜಿನಪ್ಪ, ವನಜಾಕ್ಷಿ ಶಿವಯೋಗಿ, ಪುಟ್ಟ ನಾಯ್ಕ್, ಮತ್ತಿಹಳ್ಳಿ ರಾಮಪ್ಪ, ಟಿಎಚ್ಎಂ ಮಂಜುನಾಥ್, ಗುಡೇಕೋಟೆ ಅಂಜಿನಪ್ಪ, ಗುಡಿ ನಾಗರಾಜ್, ಲಾಟಿ ದಾದಾಪೀರ್, ವಕೀಲ ವಾಗೀಶ್, ಹೆಮ್ಲಾನಾಯ್ಕ್, ಕುಂಚೂರು ಇಬ್ರಾಹಿಂ, ಕುಂಚೂರು ಸೌಕತ್, ಹರಿಯಮ್ಮನಹಳ್ಳಿ ಶಿವರಾಜ್, ಅಲಗಿಲವಾಡ ಶಂಕರ್ ಸೇರಿದಂತ್ತೆ ಹರಪನಹಳ್ಳಿ ಮತ್ತು ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪ್ರಚಾರ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.